ಬೆಂಗಳೂರು: ಮಾದಕವಸ್ತುಗಳ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಲಿಕಾನ್ ಸಿಟಿಯ ಬೇಗೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.ಮಹಮ್ಮದ್ ಅಲಗೀರ್, ಮಹಮ್ಮದ್ ರಿಪೂನ್ ಹಾಗೂ ಮೊಹರ್ ಅಲಿ ಬಂಧಿತ ಆರೋಪಿಗಳು. ಇವರು ಪಶ್ಚಮ ಬಂಗಾಳ ಮೂಲದವರು ಎನ್ನಲಾಗಿದೆ. ಬಂಧಿತರಿಂದ 4.40 ಲಕ್ಷ ನಗದು, 11 ಕೆಜಿ ಗಾಂಜಾ ಸೇರಿ ಮಾದಕವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಆರೋಪಿಗಳು ಮಾದಕ ವಸ್ತುಗಳನ್ನು ಪಶ್ಚಿಮ ಬಂಗಾಳದಿಂದ ರೈಲಿನಲ್ಲಿ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ನಗರದ ವಿವಿಧ ಭಾಗಗಳಲ್ಲಿ …
Read More »ನಾಲ್ವರಿಂದ ನಲವತ್ತಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಆತಂಕ………….
ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಾಲ್ಕು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರೋದು ಧೃಡವಾಗಿದೆ. ಪರಿಣಾಮ ನಲವತ್ತಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಆತಂಕ ಹೆಚ್ಚಾಗಿದೆ. ಈಗಾಗಲೇ ಕಾಫಿನಾಡಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಆರು ತಿಂಗಳಿಂದ ಜೈಲಿನಲ್ಲಿದ್ದ ಕೈದಿಗೂ ಕೊರೊನಾ ತಗುಲಿದ್ದು, ಆತನಿಗೆ ಸೋಂಕು ಹೇಗೆ ಬಂತು ಎಂದು ಹುಡುಕಾಡುವಷ್ಟರಲ್ಲಿಯೇ ಜಿಲ್ಲೆಯ ನಾಲ್ವರು ಪೊಲೀಸರಿಗೆ ಕೋವಿಡ್-19 ತಗುಲಿದೆ. ಇದೀಗ ಜಿಲ್ಲಾಡಳಿತತ ಜೊತೆಗೆ ಇತರೆ ಪೊಲೀಸರಿಗೆ ಕೊರೊನಾ ಢವ ಢವ ಶುರುವಾಗಿದೆ. …
Read More »ವೆಂಟಿಲೇಟರ್ ಕೊರತೆ, ಬೆಂಗಳೂರಿನ ಜನತೆಗೆ ಹೆಚ್ಚಿದ ಆತಂಕ..!
ಬೆಂಗಳೂರು, ಜೂ.17- ಬೆಂಗಳೂರು ಮಹಾನಗರದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಸಾವಿನ ಸಂಖ್ಯೆಏರಿಕೆಯಾಗಿ, ಸೋಂಕಿತರ ಸಂಖ್ಯೆ ಕೂಡ ನಿರೀಕ್ಷೆ ಮೀರಿ ಹೆಚ್ಚಾಗುತ್ತಿದೆ. ಚಿಕಿತ್ಸೆಗಾಗಿ ತುರ್ತು ನಿಗಾಘಟಕಗಳ ಕೊರತೆ ಎದುರಾಗಿರುವುದರಿಂದ ಆತಂಕದ ಕಾರ್ಮೋಡ ಕವಿದಿದೆ. ಕೊರೊನಾಗೆ ಮತ್ತೆ ಮೂರು ಮಂದಿ ಬಲಿಯಾಗಿದ್ದಾರೆ. ಮಂಗಮ್ಮನಪಾಳ್ಯದ 65 ವರ್ಷದ ವ್ಯಕ್ತಿ ಮತ್ತು ಬೆಂಗಳೂರಿನಲ್ಲಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಕಳೆದ 12ರಂದು ದಾಖಲಿಸಲಾಗಿತ್ತು. ನಿನ್ನೆ ರಾತ್ರಿ …
Read More »ಬೆಂಗಳೂರು:ಒಂದೇ ದಿನ 69,400 ರೂ. ದಂಡ ವಸೂಲಿ…….ಮಾಸ್ಕ್ ಧರಿಸದೇ ತಿರುಗಾಡುತ್ತಿದ್ದವರಿಗೆ ಬಿಸಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಗೆ ಇಳಿದು ದಂಡ ತೆತ್ತಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯ, ಮಹಾದೇವಪುರ, ಆರ್.ಆರ್ ನಗರ, ಯಲಹಂಕ, ದಾಸರಹಳ್ಳಿ, ಬೊಮ್ಮನಹಳ್ಳಿ ಸೇರಿದಂತೆ ವಿವಿಧೆಡೆ ಇಂದು ಒಂದೇ ದಿನ 69,400 ರೂ. ದಂಡ ವಸೂಲಿ ಮಾಡಲಾಗಿದೆ. ಈ ಮೂಲಕ …
Read More »ಮಾಲೀಕರ ಕಿರುಕುಳ- ಬೀದಿಗೆ ಬಿದ್ದ ಪಿಜಿ ನಿವಾಸಿಗಳು
ಬೆಂಗಳೂರು: ಕೊರೊನಾ ಹೆಮ್ಮಾರಿಗೆ ಇಡೀ ರಾಜ್ಯವೇ ತತ್ತರಿಸಿದೆ. ರಾಜ್ಯಕ್ಕೆ ರಾಜ್ಯವೇ ಲಾಕ್ ಡೌನ್ ನಿಂದ ಸ್ಥಬ್ಧಗೊಂಡಿತ್ತು. ಲಾಕ್ ಡೌನ್ ಸಡಿಲಿಕೆಯ ನಂತರ ಬೆಂಗಳೂರಿನಲ್ಲಿ ಪಿಜಿ ಮಾಲೀಕರು ಘರ್ಜಿಸ್ತಿದ್ದಾರೆ. ಪಿಜಿ ನಿವಾಸಿಗಳಿಗೆ ಹಣ ಪಾವತಿ ಮಾಡುವಂತೆ ಕಿರುಕುಳ ನೀಡ್ತಿದ್ದಾರೆ. ಪಿಜಿ ಮಾಲೀಕರ ಕಿರುಕುಳ ವಿರುದ್ಧ ಪಬ್ಲಿಕ್ ಟಿವಿ ಮೆಗಾ ಅಭಿಯಾನ ಶುರು ಮಾಡಿದೆ. ಹೌದು. ಕೊರೊನಾ ತಂದ ಅವಾಂತರ ಅಷ್ಟಿಷ್ಟಲ್ಲ. ಬೆಂಗಳೂರಿನ ಪಿಜಿಗಳಲ್ಲಿ ನೆಲೆಸಿದ್ದ ಯುವಕ-ಯುವತಿಯರಿಗೆ ಇದೀಗ ಸಂಕಷ್ಟ ಎದುರಾಗಿದ್ದು, ಪಿಜಿ …
Read More »ಮಹಿಳಾ ಸಂಘದಲ್ಲಿ ಎರಡು ಗುಂಪುಗಳ ನಡುವೆ ಜಡೆ ಜಗಳ……
ಬೆಂಗಳೂರು: ಕೊರೊನಾ ವೈರಸ್ ನಡುವೆ ಯಾವುದೇ ಮಾಸ್ಕ್ ಇಲ್ಲದೆ, ಮಹಿಳಾ ಸಂಘದಲ್ಲಿನ ಎರಡು ಗುಂಪುಗಳ ನಡುವೆ ಜಡೆ ಜಗಳ ನಡೆದಿದ್ದು, ಮಹಿಳೆಯರು ಬೀದಿಯಲ್ಲಿ ಹೊಡೆದಾಡಿಕೊಂಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂಘದ ಅಧ್ಯಕ್ಷೆಯಿಂದ ಸದಸ್ಯ ಮಹಿಳೆ ಮೇಲೆ ಹಲ್ಲೆ ನಡೆದಿದೆ. ಸಂಘದ ಸಭೆ ಮಾಡುವ ವಿಚಾರದಲ್ಲಿ ಇಬ್ಬರೂ ಜಗಳಾಡಿಕೊಂಡಿದ್ದು, ಬೀದಿ ರಂಪಾಟ ಮಾಡಿದ್ದಾರೆ. ಗಲಾಟೆಯಲ್ಲಿ ಬೈರಮ್ಮ ಗಾಯಗೊಂಡಿದ್ದು, ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ …
Read More »