Breaking News
Home / Tag Archives: RAICHUR

Tag Archives: RAICHUR

ಯಾದಗಿರಿ, ಬೀದರ್, ವಿಜಯಪುರ ಹಾಗೂ ರಾಯಚೂರಿನಲ್ಲಿ ಮತ್ತೆ ವರುಣನ ಅಬ್ಬರ.

ಬೆಂಗಳೂರು: ಯಾದಗಿರಿ, ಬೀದರ್, ವಿಜಯಪುರ ಹಾಗೂ ರಾಯಚೂರಿನಲ್ಲಿ ಮತ್ತೆ ವರುಣ ಅಬ್ಬರಿಸಿದ್ದಾನೆ. ಯಾದಗಿರಿ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಮಳೆ ಅಬ್ಬರಕ್ಕೆ ರಸ್ತೆ ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಮಳೆ ಅರ್ಭಟಕ್ಕೆ ಜನರು ತಲ್ಲಣಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ, ಖಾನಾಪುರ ಎಸ್ ಗ್ರಾಮದೊಳಗೆ ನೀರು ನುಗ್ಗಿದೆ. 30 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ತಡರಾತ್ರಿಯಿಂದ ನಿದ್ದೆ ಮಾಡದೆ ಜನರು ಹೈರಾಣಾಗಿದ್ದಾರೆ. ನಗನೂರ ಗ್ರಾಮದ …

Read More »

ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ

ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಈ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕೊರೊನಾ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳೋಣ. ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಬೇಸರದಿಂದಲೇ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಅಂತ್ಯ …

Read More »

ಮಗಳ ಮದುವೆಗೆಂದು ಬಂದಿದ್ದ ತಂದೆ ಕೊರೊನಾಗೆ ವೈರಸ್ ಗೆ ಬಲಿಯಾಗಿರುವ ಘಟನೆ ನಡೆದಿದೆ.

ರಾಯಚೂರು/ಯಾದಗಿರಿ: ಮಗಳ ಮದುವೆಗೆಂದು ಬಂದಿದ್ದ ತಂದೆ ಕೊರೊನಾಗೆ ವೈರಸ್ ಗೆ ಬಲಿಯಾಗಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ವನಕೇರಿ ಮೂಲದ ವ್ಯಕ್ತಿ(45) ರಾಯಚೂರಿನ ಸಿರವಾರ ಪಟ್ಟಣದ ವಿದ್ಯಾನಗರದಲ್ಲಿ ನಡೆದಿದ್ದ ಮದುವೆಗೆ ಆಗಮಿಸಿದ್ದರು. ಮಗಳ ಮದುವೆ ಮುಗಿಸಿದ್ದ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಕೂಡಲೇ ಅವರನ್ನು ಸಿರವಾರ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ರಾಯಚೂರು ರಿಮ್ಸ್ ಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಹಾಗೆಯೇ ರಿಮ್ಸ್ ಗೆ ಕರೆದುಕೊಂಡು ಹೋಗುತ್ತಿರುವಾಗಲೇ …

Read More »

ರಾಯಚೂರಿನ ಅಂತರರಾಜ್ಯ ಚೆಕ್‌ಪೋಸ್ಟ್‌ನಲ್ಲಿ ವಸೂಲಿ ದಂಧೆ- ಹಣ ಕೊಟ್ರೆ ಎಲ್ಲರಿಗೂ ಎಂಟ್ರಿ……

ರಾಯಚೂರು: ಜಿಲ್ಲೆಯಲ್ಲಿ 50, 100 ರೂಪಾಯಿ ಆಸೆಗೆ ಅಂತರರಾಜ್ಯ ಚೆಕ್‌ಪೋಸ್ಟ್‌ನಲ್ಲಿನ ಸಿಬ್ಬಂದಿ ಕೊರೊನಾ ವೈರಸ್ ಹರಡಿಸುತ್ತಿದ್ದಾರಾ ಎನ್ನುವ ಆತಂಕ ಮೂಡಿದೆ. ಆಂಧ್ರ ಪ್ರದೇಶದಿಂದ ಬರುವವರು ಚೆಕ್‌ಪೋಸ್ಟ್‌ನಲ್ಲಿನ ಪೊಲೀಸರಿಗೆ 100 ರೂ. ಕೊಟ್ಟರೆ ಸಾಕು ಹೋಂ ಕ್ವಾರಂಟೈನ್ ಭೀತಿಯೇ ಇಲ್ಲ. ಕೊರೊನಾ ಹರಡುವಿಕೆ ತಡೆಗಾಗಿ ಮಾಡಿರುವ ಚೆಕ್‍ಪೋಸ್ಟ್ ಸಿಬ್ಬಂದಿಯೇ ರಾಯಚೂರಿನಲ್ಲಿ ಕೊರೊನಾ ಹರಡುವುದಕ್ಕೆ ಕಾರಣರಾಗುತ್ತಿದ್ದಾರೆ. ಜಿಲ್ಲೆಯ ಗಿಲ್ಲೆಸುಗೂರು ಚೆಕ್‍ಪೋಸ್ಟ್‍ನಲ್ಲಿ ಪೋಲೀಸರು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸಿಬ್ಬಂದಿ ಕೃತ್ಯ ಈಗ ಬಟಾಬಯಲಾಗಿದೆ. …

Read More »

ಲಾಕ್‍ಡೌನ್‍ನಿಂದ ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ – ಕಂಗಾಲಾಗಿರುವ ಬೆಳೆಗಾರರು

ರಾಯಚೂರು: ಕೊರೊನಾ ಲಾಕ್‍ಡೌನ್ ಶುರುವಾದಗಿನಿಂದ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ನಷ್ಟ ಅನುಭವಿಸುತ್ತಿದ್ದಾರೆ. ಇದೀಗ ಲಾಕ್‍ಡೌನ್‍ನಿಂದ ಈರುಳ್ಳಿ ಬೆಲೆ ಕುಸಿತದಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಜಿಲ್ಲೆಯ ಮಸ್ಕಿ ತಾಲೂಕಿನ ಕೋಟೆಕಲ್ಲು ಗ್ರಾಮದಲ್ಲಿ ಈರುಳ್ಳಿ ಬೆಳೆದ ಸುಮಾರು 15 ರೈತರು ತಮ್ಮ ಬೆಳೆಯನ್ನ ಜಮೀನಿಗೆ ಅರ್ಪಿಸುತ್ತಿದ್ದಾರೆ. ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿದಿದ್ದರಿಂದ ಅದನ್ನ ಮಾರುಕಟ್ಟೆಗೆ ತೆಗೆದುಕೊಂಡು ಹೋದರೆ ಇನ್ನೂ ನಷ್ಟ ಹೆಚ್ವಾಗುತ್ತೆ ಅಂತ ಜಮೀನಿನಲ್ಲೆ ಬಿಟ್ಟಿದ್ದಾರೆ. ಸುಮಾರು 400 ಕ್ವಿಂಟಾಲ್ …

Read More »