ರಾಮನಗರ: ಮದ್ಯ ಸಿಗದೇ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವ ಊಟ ತ್ಯಜಿಸಿ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲೂಕಿನ ಗುಡಿಸರಗೂರು ಗ್ರಾಮದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಗುಡಿಸರಗೂರು ಗ್ರಾಮದ ನಿವಾಸಿ ಗುಂಡೇಗೌಡ (32) ಮೃತ ವ್ಯಕ್ತಿ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಹೀಗಾಗಿ ಮದ್ಯ ಪ್ರಿಯರಿಗೆ ಎಣ್ಣೆ ಸಿಗದಂತಾಗಿದೆ. ಗುಂಡೇಗೌಡ ಮದ್ಯದಂಗಡಿ ಮುಚ್ಚಿದಾಗಿನಿಂದ ಎಣ್ಣೆಗಾಗಿ ಹುಡುಕಾಡ ನಡೆಸಿದ್ದ. ಆದರೆ ಮದ್ಯ ಸಿಗದೆ ಇದ್ದ ಕಾರಣ …
Read More »