ಬೆಂಗಳೂರು,ಫೆ.24- ಹಫ್ತಾ ವಸೂಲಿ, ಸುಲಿಗೆ, ಬೆದರಿಕೆ ಸೇರಿದಂತೆ ಭೂಗತ ಚಟುವಟಿಕೆಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ನಟೋರಿಯಸ್ ರವಿ ಪೂಜಾರಿಯನ್ನು ಸ್ವದೇಶಕ್ಕೆ ಕರೆತಂದು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಮುಂಜಾನೆ ಸೆನೆಗಲ್‍ನಿಂದ ಬೆಂಗಳೂರಿಗೆ ರವಿ ಪೂಜಾರಿಯನ್ನು ಕರೆತರಲಾಗಿದ್ದು, ಮಡಿವಾಳದಲ್ಲಿರುವ ಇಂಟರಾಗೇಷನ್ ಕಚೇರಿಯಲ್ಲಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲಾಗಿದೆ. ಎಡಿಜಿಪಿ ಅಮರ್‍ಕುಮಾರ್ ಪಾಂಡೆ ನೇತೃತ್ವದ ತಂಡ ರವಿ ಪೂಜಾರಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಕರ್ನಾಟಕದಲ್ಲಿ ರವಿಪೂಜಾರಿ ವಿರುದ್ಧ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ರಾಜಕಾರಣಿಗಳಿಗೆ …
Read More »
Laxmi News 24×7