Breaking News
Home / Uncategorized / ಗೋಕಾಕ ತಾಲೂಕಿನ ಅನ್ ಲಾಕ್ ನಿಯಮ ಜಾರಿ

ಗೋಕಾಕ ತಾಲೂಕಿನ ಅನ್ ಲಾಕ್ ನಿಯಮ ಜಾರಿ

Spread the love

ಗೋಕಾಕ  ತಾಲೂಕಿನಲ್ಲಿ ಕಳೆದ ಒಂದು ವಾರದ Covid 19 ಪಾಜಿಟಿವಿಟಿ ದರದ ಆಧಾರದ ಮೇಲೆ ಮತ್ತು ಸರ್ಕಾರದ ನಿರ್ದೇಶನದಂತೆ ದಿನಾಂಕ: 21.06.2021, ಬೆಳಿಗ್ಗೆ 6.00 ರಿಂದ 05.07.2021, ಬೆಳಿಗ್ಗೆ 5.00 ರ ವರೆಗೆ ನಿರ್ಬಂಧಗಳ ಸಡಿಲಿಕೆಗಳನ್ನು ನೀಡಲಾಗಿದೆ.

 

• ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗಿದೆ.

• ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಇರುತ್ತದೆ.

• ಬಸ್‌ ಮತ್ತು ಖಾಸಗಿ ವಾಹನಗಳು ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.

• ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.

• ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.

• ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

• ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

 

ಅಲ್ಲದೇ ತಾಲೂಕಾವ್ಯಾಪಿ ಅನ್ವಯವಾಗುವಂತೆ:

• ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.

• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

• ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.

 

ಅಲ್ಲದೇ ಇನ್ನೂ ಸಹ Covid ಪಾಸಿಟಿವ್ ಪ್ರಕರಣಗಳು ದೃಡಪಡುತ್ತಿರುವುದರಿಂದ ಹಾಗು ಸಂಭಾವ್ಯ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳುವುದು ಅಗತ್ಯವಿರುವುದರಿಂದ ಸಾಮಾಜಿಕ ಅಂತರ ಕಾಯುವುದು, ಮಾಸ್ಕ್ ಧರಿಸುವುದು, sanitiser ಬಳಕೆ ಇತ್ಯಾದಿಗಳನ್ನು ತಪ್ಪದೇ ಪಾಲಿಸಲು ಹಾಗು ಯಾವುದೇ ರೀತಿ Covid ನಿಯಮಾವಳಿಗಳನ್ನು ಉಲ್ಲಂಘನೆ ಮಾಡದಿರಲು ಸಾರ್ವಜನಿಕರಲ್ಲಿ ಗೋಕಾಕ ತಹಶೀಲ್ದಾರ ಪ್ರಕಾಶ ಹೂಳೆಪ್ಪನವರ ವಿನಂತಿಸಿದೆ.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ