Breaking News

ತಾಳಿಕೋಟಿ ಬಂದ್: ಪ್ರಜಾಸೌಧ ಕಟ್ಟಡ ಸ್ಥಳಾಂತರಕ್ಕೆ ಆಗ್ರಹಿಸಿ ಹೋರಾಟ

Spread the love

ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕು ಹೋರಾಟ ಸಮಿತಿ ವತಿಯಿಂದ ಇಂದು ಪಟ್ಟಣದಲ್ಲಿ ಸ್ವಯಂಪ್ರೇರಿತ ಬಂದ್ ಆಚರಿಸಿ ಪ್ರತಿಭಟನೆ ನಡೆಸಲಾಯಿತು.
ತಾಲೂಕು ಆಡಳಿತವು ಮೈಲೇಶ್ವರ ಗ್ರಾಮದ ಸಮೀಪ ಪ್ರಜಾಸೌಧ ಕಟ್ಟಡ ನಿರ್ಮಿಸಲು ಸ್ಥಳ ಗುರುತಿಸಿದ್ದು, ಈ ಸ್ಥಳ ತಾಳಿಕೋಟಿ ಪಟ್ಟಣದಿಂದ ಸುಮಾರು 4 ರಿಂದ 5 ಕಿಲೋಮೀಟರ್ ದೂರದಲ್ಲಿದೆ. ಇದರಿಂದ ತಾಲೂಕಿನ ಸಾರ್ವಜನಿಕರು, ವಿಶೇಷವಾಗಿ ವೃದ್ಧರು, ಮಹಿಳೆಯರು ಹಾಗೂ ಅಂಗವಿಕಲರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.
ಈಗ ಗುರುತಿಸಿರುವ ಸ್ಥಳವು ಸಾರ್ವಜನಿಕರಿಗೆ ಅನುಕೂಲಕರವಲ್ಲ. ಆದ್ದರಿಂದ ಪ್ರಜಾಸೌಧ ಕಟ್ಟಡವನ್ನು ತಾಳಿಕೋಟಿ ಪಟ್ಟಣದ ವ್ಯಾಪ್ತಿಯಲ್ಲಿಯೇ ನಿರ್ಮಿಸಬೇಕು ಎಂದು ಒತ್ತಾಯಿಸಿದರು.
ಬಂದ್‌ಗೆ ವ್ಯಾಪಾರಸ್ಥರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಬೀದಿಬದಿ ವ್ಯಾಪಾರಸ್ಥರು ಹಾಗೂ ಎಲ್ಲಾ ಸಮುದಾಯಗಳ ಮುಖಂಡರು ಬೆಂಬಲ ಸೂಚಿಸಿದರು. ಪಟ್ಟಣದಲ್ಲಿ ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದ್ದು, ಪ್ರತಿಭಟನೆ ಶಾಂತಿಯುತವಾಗಿ ನಡೆಯಿತು.


Spread the love

About Laxminews 24x7

Check Also

ಸಾವಿನಲ್ಲೂ ಒಂದಾದ ವೃದ್ಧ ದಂಪತಿ

Spread the loveಅವ್ರು 58 ವರ್ಷದ ಹಿಂದೆ ಮದುವೆಯಾಗಿದ್ದ ವೃದ್ಧ ದಂಪತಿಗಳು. ಸತಿ-ಪತಿಯ ಪ್ರೀತಿಯ ದಾಂಪತ್ಯ ಬದುಕು ಆ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ