Breaking News

ತಾವಲಗೇರಿ ಗ್ರಾಮದ ಹೆಳವ ಜನಾಂಗದವರ ಸ್ವಂತ ಮನೆಯ ಕನಸಿಗೆ ಚಾಲನೆ!

Spread the love

​ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು ಮತ್ತು ಪ್ರತಿಯೊಬ್ಬರಿಗೂ ಗೌರವಯುತ ಜೀವನ ಸಿಗಬೇಕು ಎನ್ನುವುದು ನಮ್ಮ ಆಶಯ.

​ಇಂದು ಯರಗಟ್ಟಿ ತಾಲೂಕಿನ ಕುರುಬಗಟ್ಟಿ ಗ್ರಾಮದ ಸ.ನಂ 143/ಪಿ1 ರಲ್ಲಿನ 12 ಎಕರೆ 12 ಗುಂಟೆ ಜಮೀನಿನ ಪೈಕಿ 02 ಎಕರೆ ಜಮೀನನ್ನು, ತಾವಲಗೇರಿ ಗ್ರಾಮದ ಹೆಳವ ಜನಾಂಗದವರಿಗೆ ನಿವೇಶನ ಮತ್ತು ಮನೆ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿಗಳು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಂಜೂರು ಮಾಡಲಾಗಿದ್ದು, ಸದರಿ ಜಾಗದಲ್ಲಿ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.

​ಬಹಳ ದಿನಗಳ ಬೇಡಿಕೆಯಾಗಿದ್ದ ಈ ನಿವೇಶನ ಹಂಚಿಕೆಯಿಂದಾಗಿ ಇನ್ನು ಮುಂದೆ ನಮ್ಮ ಹೆಳವ ಜನಾಂಗದ ಕುಟುಂಬಗಳು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಲಿದೆ. ವಸತಿ ರಹಿತರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಸದಾ ಮುಂದುವರಿಯಲಿದೆ.

​ಈ ಶುಭ ಸಂದರ್ಭದಲ್ಲಿ ಸ್ಥಳೀಯ ಮುಖಂಡರು , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮದ ಪ್ರಮುಖರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ