Breaking News

ಶಾಲೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅತಿಥಿ ಶಿಕ್ಷಕ – ಹೃದಯಾಘಾತದಿಂದ ಸಾವು

Spread the love

ರಾಯಚೂರು: ಶಾಲೆಯಲ್ಲಿದ್ದಾಗಲೇ ಎದೆನೋವು ಕಾಣಿಸಿಕೊಂಡು ಯುವ ಅತಿಥಿ ಶಿಕ್ಷಕರೊಬ್ಬರು  ಹೃದಯಾಘಾತದಿಂದ  ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಸ್ಕಿ  ತಾಲೂಕಿನ ಮೆದಿಕಿನಾಳ ಗ್ರಾಮದಲ್ಲಿ ನಡೆದಿದೆ.

ನಾಗರಬೆಂಚಿ ಗ್ರಾಮದ 29 ವರ್ಷದ ವೀರನಗೌಡ ಪಾಟೀಲ್ ಮೃತಪಟ್ಟಿರುವ ಶಿಕ್ಷಕ. ಮೆದಿಕಿನಾಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿದ್ದ ವೀರನಗೌಡ ಪಾಟೀಲ್ ಊಟದ ನಂತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಮಸ್ಕಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

ಚಿಕ್ಕವಯಸ್ಸಿನಲ್ಲೇ ಶಿಕ್ಷಕ ಏಕಾಏಕಿ ಸಾವನ್ನಪ್ಪಿದ್ದಕ್ಕೆ ವಿದ್ಯಾರ್ಥಿಗಳು, ಸಹ ಶಿಕ್ಷಕರು ಆತಂಕಕ್ಕೊಳಗಾಗಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ