Breaking News

ಸ್ಯಾಲರಿ ಹಣಕ್ಕೆ ಅತ್ತೆ, 1 ಕೋಟಿ ಮೌಲ್ಯದ ಫ್ಲಾಟ್‌ಗಾಗಿ ಮಾವನಿಂದ ಒತ್ತಾಯ – ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ

Spread the love

ಮುಂಬೈ: ಅತ್ತೆ-ಮಾವನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ  ಪುಣೆಯಲ್ಲಿ  ನಡೆದಿದೆ. ಪೊಲೀಸರು ಆಕೆಯ ಪತಿ ಮತ್ತು ಆತನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತ್ರಿಷ್ಣಾ ರಾಹುಲ್ ಸಕ್ಪಾಲ್ ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2018ರಲ್ಲಿ ರಾಹುಲ್ ಸಕ್ಪಾಲ್ ಅವರನ್ನು ವಿವಾಹವಾಗಿದ್ದರು. ಮಹಿಳೆಯ ತಂದೆ ಬಾಲಕೃಷ್ಣ ನಿಕಮ್ ಅವರು ಪೊಲೀಸ್‌ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾರೆ.

ವಿವಾಹವಾದಾಗಿನಿಂದಲೂ ತ್ರಿಷ್ಣಾಳ ಪೂರ್ತಿ ವೇತನವನ್ನು ನೀಡುವಂತೆ ಅತ್ತೆ ಮನೆಯವರು ಕಿರುಕುಳ ನೀಡುತ್ತಿದ್ದರು. ತವರು ಮನೆಯ ಫ್ಲ್ಯಾಟ್ ಅನ್ನು ಅತ್ತೆಯ ಹೆಸರಿಗೆ ವರ್ಗಾಯಿಸುವಂತೆ ಮತ್ತು ಮಾವನಿಗಾಗಿ 1 ಕೋಟಿ ರೂಪಾಯಿ ಮೌಲ್ಯದ ಫ್ಲ್ಯಾಟ್ ಅನ್ನು ಖರೀದಿಸುವಂತೆ ನನ್ನ ಮಗಳ ಮೇಲೆ ಒತ್ತಡ ಹೇರಿದ್ದರೆಂದು ನಿಕಮ್‌ ಆರೋಪಿಸಿದ್ದಾರೆ.

ದೌರ್ಜನ್ಯದಿಂದ ನೊಂದ ಆಕೆ 2021ರಲ್ಲಿ ತನ್ನ ತಂದೆ-ತಾಯಿಯ ಮನೆಗೆ ಮರಳಿದ್ದರು. ನಂತರ ಆಕೆಯ ಪತಿ ಮರುಮದುವೆಯಾಗಲು ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದನಾದರೂ, ಆ ಪ್ರಕರಣವು ಸದ್ಯ ನ್ಯಾಯಾಲಯದಲ್ಲಿ ಬಾಕಿ ಇದೆ. ಆದರೆ, ಈಗ ಟೆಕ್ಕಿ ತ್ರಿಷ್ಣಾ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನನ್ನ ಸಾವಿಗೆ ಪತಿ, ಅತ್ತೆ ವೈಶಾಲಿ, ಮಾವ ಸಂಜಯ್, ನಾದಿನಿ ಶೈಲಿ ಮತ್ತು ಅಜ್ಜಿ-ಅತ್ತೆ ಶಕುಂತಲಾ ಸಾಳುಂಕೆ ಕಾರಣ ಎಂದು ಮಹಿಳೆ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕೆಯ ತಂದೆಯ ದೂರಿನ ಆಧಾರದ ಮೇಲೆ ಐವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.


Spread the love

About Laxminews 24x7

Check Also

ಮಾಡೆಲ್‌ ಗೆಳತಿಯಿಂದ ಬ್ಲ್ಯಾಕ್‌ಮೇಲ್? – ಫ್ಲ್ಯಾಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಉದ್ಯಮಿ ಸಾವು

Spread the loveಲಕ್ನೋ: ಫ್ಲ್ಯಾಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು 28 ವರ್ಷದ ಉದ್ಯಮಿ ಶಿವ ಶರ್ಮಾ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ