Breaking News

ನಿಖಿಲ್ ಕುಮಾರಸ್ವಾಮಿಗೆ ದೇಗುಲ ದಿಗ್ಬಂಧನ – ʻಕೈʼ ಕಾರ್ಯಕರ್ತರಿಂದ ದೇವಾಲಯಕ್ಕೆ ಬೀಗ!

Spread the love

ರಾಮನಗರ: ಜೆಡಿಎಸ್‌ ಯುವಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರಿಗೆ ದೇಗುಲ ಪ್ರವೇಶ ನಿರಾಕರಣೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿಖಿಲ್‌ ಕುಮಾರಸ್ವಾಮಿ ಅವರು ದೇಗುಲಕ್ಕೆ ಬರುತ್ತಿದ್ದಾರೆ ಎನ್ನುವ ವಿಷಯ ತಿಳಿದು, ಸ್ಥಳೀಯ ಕಾಂಗ್ರೆಸ್‌ ಕಾರ್ಯಕರ್ತರು ದೇವಾಲಯಕ್ಕೆ ಬೀಗ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಯಕರ್ತ  ರವಿ ಎಂಬಾತನಿಂದ ದೇವಾಲಯಕ್ಕೆ ಬೀಗ ಹಾಕಿದ್ದಾರೆ ಎಂದು ಜೆಡಿಎಸ್‌ ತಾಲೂಕು ಘಟಕದ ಅಧ್ಯಕ್ಷ ರಾಮು ಆರೋಪಿಸಿದ್ದಾರೆ.

ಈ ಬೆಳವಣಿಗೆ ಜೆಡಿಎಸ್‌ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ದಳದ ಕಾರ್ಯಕರ್ತರು ʻಕೈʼ ಕಾರ್ಯಕರ್ತರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಆಗಿದ್ದೇನು?
ನಿನ್ನೆ ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಆಗಿರೋ ಮಾರಮ್ಮ ದೇವಾಲಯದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮ ನಿಗದಿಯಾಗಿತ್ತು. ಈ ಹಿನ್ನೆಲೆ ದೇವಾಲಯಕ್ಕೆ ನಿಖಿಲ್‌ ಭೇಟಿ ಕೊಟ್ಟಿದ್ದರು. ಆದ್ರೆ ನಿಖಿಲ್‌ ಭೇಟಿ ವೇಳೆ ದೇವಾಲಯಕ್ಕೆ ಕಾಂಗ್ರೆಸ್‌ನ ಕಾರ್ಯಕರ್ತರು ಬೀಗ ಜಡಿದಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ನಿಖಿಲ್‌ ಅವರು ದೇವರ ದರ್ಶನ ಪಡೆಯದೇ ವಾಪಸ್ಸ್ ತೆರಳಿದ್ದಾರೆ.

ಬಳಿಕ ಜೆಡಿಎಸ್-ಕಾಂಗ್ರೇಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಕಾಂಗ್ರೆಸ್‌ನವರು ಹೆಚ್ಚು ಅನುದಾನ ಕೊಟ್ಟಿದ್ದಾರೆ ಎಂಬ ಕಾರಣಕ್ಕೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ.

ಇನ್ನೂ ಈ ಘಟನೆ ಕುರಿತು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿ, ಘಟನೆಯನ್ನ ಖಂಡಿಸಿದ್ದಾರೆ. ದೇವಾಲಯಕ್ಕೆ ಬೀಗ ಹಾಕಿರುವುದು ತಪ್ಪು. ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ರೀತಿ ನಡೆದುಕೊಳ್ಳಬಾರದು. ಇಂತಹ ಘಟನೆಗಳಿಗೆ ನಾನು ಎಂದಿಗೂ ಪ್ರಚೋದನೆ ನೀಡುವುದಿಲ್ಲ, ನನಗೆ ಅದು ಇಷ್ಟವೂ ಇಲ್ಲ ಎಂದಿದ್ದಾರೆ.


Spread the love

About Laxminews 24x7

Check Also

ದೇಸೂರು ಶಾಲೆಗೆ 5 ಎಕರೆ ಜಮೀನು ಕೊಡಿಸಲು ಪ್ರಯತ್ನ: ಲಕ್ಷ್ಮೀ ಹೆಬ್ಬಾಳಕರ್

Spread the loveಬೆಳಗಾವಿ: ದೇಸೂರು ಗ್ರಾಮದ ಸರ್ಕಾರಿ ಆದರ್ಶ ಪೂರ್ವ ಪ್ರಾಥಮಿಕ ಮರಾಠಿ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ