Breaking News

ಸೈಕಲ್‌ಗೆ ಟೆಂಪೋ ಡಿಕ್ಕಿ- 11 ವರ್ಷದ ಬಾಲಕ ಸ್ಥಳದಲ್ಲೇ ಸಾವು

Spread the love

ಚಾಮರಾಜನಗರ: ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನಿಗೆ ಟೆಂಪೋ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಹರಳೆ ಗ್ರಾಮದ ಬಳಿ ನಡೆದಿದೆ.

ಮೃತ ಬಾಲಕನನ್ನು ಯಶವಂತ್ (11) ಎಂದು ಗುರುತಿಸಲಾಗಿದೆ. ಬಾಲಕ ಸೈಕಲ್ ಹೊಡೆಯುತ್ತಿದ್ದಾಗ ಯಮಸ್ವರೂಪಿಯಾಗಿ ಬಂದ ಟೆಂಪೋ ಡಿಕ್ಕಿ ಹೊಡೆದಿದೆ.

ಬಾಲಕ ಬೇಸಿಗೆ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಅಜ್ಜಿ ಮನೆಗೆ ಬಂದಿದ್ದ. ಕುಟುಂಬಸ್ಥರು ಮೊನ್ನೆಯಷ್ಟೇ ಸೈಕಲ್ ಕೊಡಿಸಿದ್ದರು. ಘಟನೆ ನಡೆದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ, ಟೆಂಪೋ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ

Spread the loveಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ