ಬೆಳಗಾವಿ : ಕಾರು ಮತ್ತು ಬೊಲೆರೊ ನಡುವೆ ಭೀಕರ ಅಪಘಾತ ಸಂಭವಿಸಿರುವ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಕೆಂಗಾನೂರ- ಗರ್ಜೂರು ರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿರುವವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಬೈಲಹೊಂಗಲ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣವು ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ಅಪಘಾತದ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Laxmi News 24×7