Breaking News

ಎರಡು ಕಾರುಗಳ ನಡುವೆ ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ದುರ್ಮರಣ

Spread the love

ತುಮಕೂರು: ಎರಡು ಕಾರುಗಳ ನಡುವೆ ಭೀಕರ ಅಪಘಾತ  ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿರುವ ಹುಳಿಯಾರು ಬಳಿಯ ಕೆಂಕೆರೆ ಗ್ರಾಮದಲ್ಲಿ ನಡೆದಿದೆ.

ಮೃತರು ಆಂಧ್ರಪ್ರದೇಶ ಮೂಲದವರು. ತಂದೆ – ತಾಯಿ, ಗಂಡ – ಹೆಂಡತಿ ಹಾಗೂ ಇಬ್ಬರು ಮಕ್ಕಳು ಓಮಿನಿ ಕಾರಿನಲ್ಲಿ ಬರುತ್ತಿದ್ದರು. ಹಿರಿಯೂರು ಮಾರ್ಗವಾಗಿ ಹುಳಿಯಾರು ಕಡೆಗೆ ಬರುತ್ತಿದ್ದ ವೇಳೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ