ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ, ಅಜ್ಜ, ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್ಯಾಸನಕೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಕರ್ನಾರಹಟ್ಟಿ ಗ್ರಾಮದ ಈಶ್ವರಪ್ಪ (55) ಹಾಗೂ ಅವರ ಮೊಮ್ಮಗಳು ಸೃಷ್ಟಿ (14) ಮೃತ ದುರ್ದೈವಿಗಳು. ಮೃತ ಸೃಷ್ಟಿ ಕೂಡ್ಲಿಗಿ ಪಟ್ಟಣದ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಪರೀಕ್ಷೆ ಮುಗಿದಿದ್ದ ಕಾರಣ ತಾತನ ಜೊತೆ ಬೈಕ್‌ನಲ್ಲಿ ಸ್ವಗ್ರಾಮಕ್ಕೆ ಹೊರಟಿದ್ದಳು. ಹೆದ್ದಾರಿಯಲ್ಲಿ ರೈತರು ರಾಗಿ ಒಣಗಿಸಲು ಹಾಕಿದ್ದರಿಂದ ಬೈಕ್ ರಾಗಿಯಲ್ಲಿ ಹೋಗಿ ಸ್ಕಿಡ್ ಆಗಿ ಬಿದ್ದಿದೆ. ಬೈಕ್ ಸ್ಕಿಡ್ ಆಗಿದ್ದರಿಂದ ತಾತ, ಮೊಮ್ಮಗಳು ಇಬ್ಬರೂ ಕೆಳಕ್ಕೆ ಬಿದ್ದಿದ್ದಾರೆ. ಆಗ ಹಿಂಬದಿಯಲ್ಲಿ ಬರ್ತಿದ್ದ ಲಾರಿ ಹರಿದು, ಇಬ್ಬರೂ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಕೂಡ್ಲಿಗಿ ಪಿಎಸ್‌ಐ, ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Laxmi News 24×7