Breaking News

ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಗ್ರನಿಗೆ 7 ವರ್ಷ ಜೈಲು ಶಿಕ್ಷೆ

Spread the love

ಬೆಂಗಳೂರು: ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಗ್ರನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್‌ಐಎ ಕೋರ್ಟ್‌  ತೀರ್ಪು ನೀಡಿದೆ.

ಪ್ರಮುಖ ಆರೋಪಿ ಮೊಹಮ್ಮದ್ ಹನೀಫ್ ಖಾನ್‌ಗೆ ಕೋರ್ಟ್‌ ಶಿಕ್ಷೆ ವಿಧಿಸಿದೆ. 2020 ರಂದು ರಾಜ್ಯ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡಿದ್ದರು. ನಂತರ ಎನ್‌ಐಎ ಎಂಟ್ರಿಯಾಗಿ ಒಟ್ಟು 20 ಆರೋಪಿಗಳನ್ನು ಬಂಧಿಸಿತ್ತು. ಬಂಧನ ಮಾಡಿ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಿತ್ತು.

ಇದರಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಹನೀಫ್ ಖಾನ್ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಕೋರ್ಟ್ ವಿಚಾರಣೆಯ ವೇಳೆ ತನ್ನ ತಪ್ಪನ್ನು ಹನೀಫ್‌ ಒಪ್ಪಿಕೊಂಡಿದ್ದ. 7 ವರ್ಷಗಳ ಜೈಲು ಶಿಕ್ಷೆ, 48,000 ರೂ. ದಂಡ ವಿಧಿಸಿ ಕೋರ್ಟ್‌ ಆದೇಶಿಸಿದೆ.

ಐಸಿಸ್ ಸದಸ್ಯರಿಗೆ ತರಬೇತಿಗೆ & ಅಡಗುತಾಣ ಸ್ಥಾಪಿಸಲು ಆರೋಪಿ ಹನೀಫ್‌ ಸಹಾಯ‌ ಮಾಡಿದ್ದ. ಚಾಮರಾಜನಗರ ಜಿಲ್ಲೆ ಶಿವನಸಮುದ್ರ ಮತ್ತು ಗುಂಡ್ಲುಪೇಟೆ ಪ್ರದೇಶಗಳಿಗೆ ಇವರು ಹೋಗಿದ್ದರು ಎನ್ನಲಾಗಿದೆ.


Spread the love

About Laxminews 24x7

Check Also

ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವು

Spread the loveಬೆಳಗಾವಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ