ಬಳ್ಳಾರಿ: ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ ಹಲ್ಲೆ ಮಾಡಿ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು ಕೊನೆಗೂ ಪತ್ತೆ ಹಚ್ಚಿದ್ದಾರೆ.
ಮೊನ್ನೆ ರಾತ್ರಿ ಆರೋಪಿ ಹಾಸ್ಟೆಲ್‌ನಲ್ಲಿ ಮಲಗಿದ್ದ ಎಂಟು ವಿದ್ಯಾರ್ಥಿಗಳು ಹಾಗೂ ವಾರ್ಡನ್ ಮೇಲೆ ರಾಡ್‌ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ.
ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದರೆ, 8 ಜನರಿಗೆ ಗಾಯವಾಗಿತ್ತು. ಆರೋಪಿ ಬಾಲಕನ ಪತ್ತೆಗಾಗಿ 7 ಪ್ರತ್ಯೇಕ ತಂಡ ರಚನೆ ಮಾಡಲಾಗಿತ್ತು.
ತೀವ್ರ ಹುಡುಕಾಟ ನಡೆಸಿದ ಬಳ್ಳಾರಿ ಗ್ರಾಮೀಣ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ತನ್ನ ಊರಾದ ಗೋನಾಳ ಗ್ರಾಮದ ಹೊರ ವಲಯದ ಲೇಔಟ್ ಒಂದರಲ್ಲಿ ಅಡಗಿ ಕುಳಿತಿದ್ದ ಬಾಲಕನನ್ನು ವಶಕ್ಕೆ ಪಡೆದು ವೈದ್ಯರ ಮೂಲಕ ಕೌನ್ಸಿಲಿಂಗ್ ಮಾಡಿಸಲಾಗಿದೆ.
ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ.
Laxmi News 24×7