Breaking News

ದೀಪಾವಳಿ ಹಬ್ಬದ ಎಫೆಕ್ಟ್‌; ಬೆಂಗಳೂರಿಂದ ಊರುಗಳತ್ತ ಜನರ ದಂಡು – ಕಿ.ಮೀ.ಗಟ್ಟಲ್ಲೇ ಟ್ರಾಫಿಕ್‌ ಜಾಮ್‌

Spread the love

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಊರುಗಳತ್ತ ಹೊರಟಿರುವ ಜನರ ದಂಡು ಹೊರಟಿದೆ. ಪರಿಣಾಮವಾಗಿ ರಸ್ತೆಗಳಲ್ಲಿ ವಾಹನಗಳು ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿವೆ.

ತುಮಕೂರು ರಸ್ತೆಯಲ್ಲಿ ವಾಹನಗಳು ಟ್ರಾಫಿಕ್‌ನಲ್ಲಿ ಸಾಲಾಗಿ ನಿಂತಿವೆ. ಯಶವಂತಪುರ ಫ್ಲೈಓವರ್‌ನಿಂದಲೇ ಟ್ರಾಫಿಕ್‌ ಜಾಮ್‌ ಶುರುವಾಗಿ ಜನರು ಹೈರಾಣಾಗಿದ್ದಾರೆ. ಹೆದ್ದಾರಿಯಲ್ಲಿ ವಾಹನಗಳು ಸ್ಲೋ ಮೂವಿಂಗ್ ಆಗುತ್ತಿವೆ. ಬೆಂಗಳೂರು ಕ್ರಾಸ್ ಮಾಡಲು ಗಂಟೆಗಟ್ಟಲೇ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ವಾಹನ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟಿದೆ. ಮುಂದಿನ ಕೆಲ ಗಂಟೆಗಳ ಕಾಲ ಇದೇ ಟ್ರಾಫಿಕ್ ಜಾಮ್ ಮುಂದುವರಿಯುವ ಸಾಧ್ಯತೆ ಇದೆ.

ದೀಪಾವಳಿ ಹಬ್ಬದ ಪ್ರಯುಕ್ತ 2600 ಹೆಚ್ಚುವರಿ ಬಸ್ ವ್ಯವಸ್ಥೆ
ಹಬ್ಬದ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಜನರು ತಮ್ಮ ತಮ್ಮ ಊರುಗಳತ್ತ ತೆರಳುವ ಕಾರಣ ಕೆಎಸ್‌ಆರ್‌ಟಿಸಿಯಿಂದ 2,600 ಹೆಚ್ಚುವರಿ ಬಸ್‌ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ಮೈಸೂರು ರಸ್ತೆ ಬಸ್ ನಿಲ್ದಾಣ, ಶಾಂತಿನಗರ ಟಿಟಿಎಂಸಿ ನಿಲ್ದಾಣಗಳಿಂದ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿವೆ.

ಟಿಕೆಟ್ ಕಾಯ್ದಿರಿಸಿದ ಬಸ್‌ಗಳು ಶಾಂತಿನಗರ ಟಿಟಿಎಂಸಿ, ವಿಜಯನಗರ ಟಿಟಿಎಂಸಿ, ಯಶವಂತಪುರ ಟಿಟಿಎಂಸಿ, ಜಯನಗರ ಟಿಟಿಎಂಸಿ, ಮಲ್ಲೇಶ್ವರಂ 18ನೇ ಕ್ರಾಸ್ ಬಸ್ ನಿಲ್ದಾಣ, ಬಸವೇಶ್ವರ ನಗರ ಬಸ್ ನಿಲ್ದಾಣ (ಶಾರದಾ ಕಾಲೋನಿ), ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಟಿನ್ ಫ್ಯಾಕ್ಟರಿ ಹಾಗೂ ಇನ್ನಿತರೆ ಬಸ್ ನಿಲ್ದಾಣಗಳಿಂದ ಕಾರ್ಯಾಚರಣೆ ನಡೆಸುತ್ತಿವೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಉಡುಪಿ, ಕುಂದಾಪುರ, ಪುತ್ತೂರು, ಮಂಗಳೂರು, ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ದಾವಣಗೆರೆ, ಗೋಕರ್ಣ, ಹಾಸನ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಬಸ್‌ಗಳು ವಿಶೇಷ ಕಾರ್ಯಾಚರಣೆ ಮಾಡುತ್ತಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಿವೆ. ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಬರ ಪರಿಹಾರಕ್ಕಾಗಿ ಕೇಂದ್ರದ ಬಳಿ ಸರ್ವಪಕ್ಷ ‌ನಿಯೋಗ ಹೋದ ಉದಾಹರಣೆ ಇಲ್ಲ: ಹೆಚ್‌ಡಿಕೆ

Spread the loveಬೆಂಗಳೂರು: ಬರ ಪರಿಹಾರಕ್ಕಾಗಿ  ಕೇಂದ್ರಕ್ಕೆ  ಯಾವತ್ತು ಸರ್ವಪಕ್ಷದ ನಿಯೋಗಕ್ಕೆ ಕರೆದುಕೊಂಡು ಹೋದ ಉದಾಹರಣೆ ಇಲ್ಲ ಅಂತ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ