Breaking News

ರಾಜ್ಯದಲ್ಲಿ SIRಗೆ ಸರ್ಕಾರವೇ ಅಧಿಕಾರಿಗಳನ್ನ ಎತ್ತಿ ಕಟ್ಟುತ್ತಿದೆ – ವಿಜಯೇಂದ್ರ ಆರೋಪ

Spread the love

ಬೆಂಗಳೂರು: ರಾಜ್ಯದಲ್ಲಿ SIRಗೆ ರಾಜ್ಯ ಸರ್ಕಾರವೇ ಅಧಿಕಾರಿಗಳನ್ನ ಎತ್ತಿ ಕಟ್ಟುತ್ತಿದೆ ಎಂದು ಬಿಜೆಪಿ  ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವೇ ಎಸ್ಐಆರ್  ವಿಚಾರದಲ್ಲಿ ದ್ವಂದ್ವ ನಿಲುವು ತೋರುತ್ತಿದೆ. ಅಧಿಕಾರಿಗಳನ್ನು ರಾಜ್ಯ ಸರ್ಕಾರವೇ ಎತ್ತಿ ಕಟ್ಟುತ್ತಿದೆ. BLOಗಳು ಪ್ರತಿಭಟನೆ ಮಾಡ್ತಾರಂತೆ. ಇದಕ್ಕೆ ರಾಜ್ಯ ಸರ್ಕಾರ ಕುಮ್ಮಕ್ಕು ಕೊಡ್ತಿದೆ ಎಂದಿದ್ದಾರೆ.

ವಾಸ್ತವ ಸತ್ಯವನ್ನು ಸಿಎಂ, ಪ್ರಿಯಾಂಕ್ ಖರ್ಗೆ ಅವರಿಗೆ ಕೇಳ್ತೀನಿ. ನಿಮ್ಮ ಕಾಂಗ್ರೆಸ್ ಮಹಾನ್ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವ ಪಡೆದಿದ್ದಾರೆ. ಇಲ್ಲ ಅಂತ ಬಹಿರಂಗವಾಗಿ ಹೇಳಲಿ ನೋಡೋಣ. ರಾಹುಲ್ ಗಾಂಧಿ ಇನ್ನೊಂದು ‌ದೇಶದ ಪೌರತ್ವ ಇಟ್ಟುಕೊಂಡು ಅಕ್ರಮವಾಗಿ ಸುಳ್ಳು ಮಾಹಿತಿಯನ್ನು ಕೊಟ್ಟಿದ್ದಾರೆ. ಇದರ ಬಗ್ಗೆ ಸತ್ಯ ಹೇಳುವ ಕೆಲಸ ಕಾಂಗ್ರೆಸ್ ಮಾಡಲಿ ಅಂತ ಸವಾಲ್ ಹಾಕಿದ್ದಾರೆ.

SIR ಆಗ್ತಿರೋದು‌ ಯಾಕೆ? ಚುನಾವಣೆ ಆಯೋಗ ತೆಗೆದುಕೊಂಡಿರೋ ನಿರ್ಧಾರ. ಅಕ್ರಮ ವಲಸಿಗರು, ಡಬಲ್ ಎಂಟ್ರಿ, ಸತ್ತಿರೋರು ಎಲ್ಲವೂ ಸರಿ ಮಾಡುವ ಕೆಲಸ ಆಯೋಗ ಮಾಡ್ತಿದೆ. ಸಾಂವಿಧಾನಿಕ ಸಂಸ್ಥೆ ವಿರುದ್ಧ ಅಧಿಕಾರಿಗಳನ್ನು, ಜನರನ್ನು ಎತ್ತಿ ಕಟ್ಟುವ ಕೆಲಸಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಇದು ಅಕ್ಷಮ್ಯ ಅಪರಾಧ ಅಂತ ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ