Breaking News

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Spread the love

ಬೆಂಗಳೂರು: ಗ್ಯಾರಂಟಿ ಯೋಜನೆಗಳ  ಪರಿಷ್ಕರಣೆ ಮಾಡುತ್ತೇವೆ, ಆದರೆ ಸಿಎಂ, ಸಚಿವರು ಇನ್ನೂ ಈ ಬಗ್ಗೆ ಮಾತನಾಡಿಲ್ಲ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ  ಹೇಳಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, 51 ಸಾವಿರ ಕೋಟಿ ಇಟ್ಟು ಗ್ಯಾರಂಟಿ ಯಶಸ್ವಿಯಾಗಿದೆ. 91% ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗಿದೆ. ಲಂಚ ಇಲ್ಲದೆ ಯೋಜನೆಗಳ ಹಣ ನೇರ ವರ್ಗಾವಣೆ ಆಗಿದೆ. ಯಾರೆಲ್ಲ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಾರೆ ಅವರಿಗೆ ಸರಿಯಾದ ಮಾಹಿತಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಗ್ಯಾರಂಟಿಗಳನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆ. ಮೃತರ ಅಕೌಂಟ್‌ಗೆ ಗೃಹಲಕ್ಷ್ಮಿ ಹಣ ಹೋಗಿದೆ. ಈ ಅಕೌಂಟ್‌ಗಳನ್ನು ಪತ್ತೆ ಮಾಡುವ ಕೆಲಸ ಮಾಡುತ್ತಿದ್ದೇವೆ. ಯುವನಿಧಿ ಕೂಡ ನಿಂತಿಲ್ಲ. ಬಿಜೆಪಿಗರು ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಅಂದ್ರು ಏನು ಮಾಡಿಲ್ಲ. ವಿದ್ಯಾರ್ಥಿಗಳಿಗೆ, ಯುವಕರಿಗೆ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ರೇವಣ್ಣ ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ