Breaking News

ಪ್ರವಾಹ ಎದುರಿಸಿದ್ದ ಕೃಷ್ಣೆಯ ಒಡಲು ಈಗ ಖಾಲಿ

Spread the love

ಯಾದಗಿರಿ: ಪ್ರವಾಹ ಎದುರಿಸಿದ್ದ ಕೃಷ್ಣಾ ನದಿಯ ಒಡಲು ಈಗ ರಣ ಬಿಸಿಲಿನಿಂದಾಗಿ ಖಾಲಿಯಾಗಿದೆ.

ಯಾದಗಿರಿ ಜಿಲ್ಲೆಯ ರೈತರ ಜೀವನಾಡಿ ಕೃಷ್ಣಾ ನದಿ. ಮಳೆಗಾಲದಲ್ಲಿ ಪ್ರವಾಹ ಎದುರಿಸಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ಕೃಷ್ಣಾ ನದಿ ಒಡಲು ಬೇಸಿಗೆಯ ರಣ ಬಿಸಿಲಿಯಿಂದ ಖಾಲಿಯಾಗಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ  ಗ್ರಾಮದ ಮೌನೇಶ್ವರ ದೇಗುಲ ದಕ್ಷಿಣ ಕಾಶಿ ಎಂದೇ ಖ್ಯಾತಿಯಾಗಿದೆ. ಕೃಷ್ಣಾ ನದಿ ತೀರದಲ್ಲಿರುವ ಈ ದೇವಸ್ಥಾನಕ್ಕೆ ಭಕ್ತರು ಆಗಮಿಸಿ, ನದಿಯಲ್ಲಿ ಪುಣ್ಯಸ್ನಾನ ಮಾಡಿ, ಬಳಿಕ ದೇವರ ದರ್ಶನ ಪಡೆಯುತ್ತಾರೆ. ಆದರೆ ಸದ್ಯಕ್ಕೆ ನದಿ ಬತ್ತಿಹೋದ ಕಾರಣ ಭಕ್ತರು ಪುಣ್ಯಸ್ನಾನ ಮಾಡಲು ಪರದಾಡುತ್ತಿದ್ದಾರೆ.

ನೀರು ಕಡಿಮೆಯಾದ್ದರಿಂದ ಮೀನುಗಳ ಕೊರತೆಯುಂಟಾಗಿ ಪಕ್ಷಿಗಳಿಗೆ ಆಹಾರದ ಕೊರತೆ, ಜಾನುವಾರುಗಳಿಗೂ ನೀರಿನ ಸಮಸ್ಯೆ ಎದುರಾಗಿದೆ. ಹೀಗಾಗಿ ನದಿಗೆ ನೀರು ಬಿಡುವಂತೆ ಸ್ಥಳೀಯರು, ಭಕ್ತರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ