Breaking News

ವಕೀಲ ವೃತ್ತಿಗೆ ಬೌದ್ಧಿಕ ಕೌಶಲ್ಯ, ನಿರಂತರ ಅಧ್ಯಯನ ಅಗತ್ಯ: ಪದ್ಮಾವತಿ ಮಾನೆ

Spread the love

ಬಾಗಲಕೋಟೆ: ವಕೀಲ ವೃತ್ತಿಯು ಸಮಾಜದ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಶ್ರೇಷ್ಠ ವೃತ್ತಿಯಾಗಿದ್ದು, ಈ ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಬೌದ್ಧಿಕ ಕೌಶಲ್ಯ, ಭಾಷಾ ಪ್ರೌಢಿಮೆ, ಸಂವಹನ ಕಲೆ, ಶ್ರದ್ಧೆ ಹಾಗೂ ನಿರಂತರ ಅಧ್ಯಯನ ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪದ್ಮಾವತಿ ಮಾನೆ ಹೇಳಿದರು.
ನಗರದ ಎಸ್.ಸಿ. ನಂದಿಮಠ ಕಾನೂನು ಮಹಾವಿದ್ಯಾಲಯದಲ್ಲಿ ೨೦೨೬-೨೭ನೇ ಸಾಲಿನ ವಿದ್ಯಾರ್ಥಿ ಸಂಘ, ಎನ್‌ಎಸ್‌ಎಸ್, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಕೀಲ ವೃತ್ತಿಯು ಸ್ವತಂತ್ರ ವೃತ್ತಿಯಾಗಿದ್ದು, ಇಲ್ಲಿ ಯಾವುದೇ ಭಯ ಅಥವಾ ಇತಿಮಿತಿಗಳಿಲ್ಲದೆ ಕಾರ್ಯನಿರ್ವಹಿಸಲು ಅವಕಾಶವಿದೆ. ರಾಜಕಾರಣಿಗಳು, ಐಎಎಸ್ ಅಧಿಕಾರಿಗಳಿಂದ ಹಿಡಿದು ಸಾಮಾನ್ಯ ಜನರವರೆಗೆ ಎಲ್ಲ ವರ್ಗದ ಜನರೊಂದಿಗೆ ಸಂಪರ್ಕ ಹೊಂದುವ ವಿಶಿಷ್ಟ ವೃತ್ತಿ ಇದಾಗಿದೆ. ಇತ್ತೀಚಿನ ದಿನಗಳಲ್ಲಿ ಇತರ ವೃತ್ತಿಗಳಿಗೆ ಹೋಲಿಸಿದರೆ ವಕೀಲ ವೃತ್ತಿಯಲ್ಲಿ ಹೆಚ್ಚಿನ ಅವಕಾಶಗಳು ದೊರೆಯುತ್ತಿವೆ. ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದು ಹೇಳಿದರು.
ವಿದ್ಯಾರ್ಥಿಗಳು ವರ್ಷಪೂರ್ತಿ ನಡೆಯುವ ಕ್ರೀಡೆ, ಎನ್‌ಎಸ್‌ಎಸ್ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ದೈಹಿಕ ಮತ್ತು ಮಾನಸಿಕ ಸಮತೋಲನ ಕಾಪಾಡಿಕೊಳ್ಳಬೇಕು. ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದ ಮೂಲಕ ಉತ್ತಮ ವಕೀಲರಾಗಿ ಕಾಲೇಜಿಗೆ ಮತ್ತು ಸಮಾಜಕ್ಕೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಂ.ಪಿ. ಚಂದ್ರಿಕಾ ಮಾತನಾಡಿ, ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಶ್ರದ್ಧೆ ಮತ್ತು ನಿರಂತರ ಪ್ರಯತ್ನದಿಂದ ಅಸಾಧ್ಯವಾದುದನ್ನೂ ಸಾಧ್ಯವಾಗಿಸಬಹುದು. ವಿದ್ಯಾರ್ಥಿಗಳು ಮಹಾವಿದ್ಯಾಲಯದಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ನ್ಯಾಯವಾದಿಗಳಾಗಿ ಹೊರಹೊಮ್ಮಬೇಕು ಎಂದರು.
ಸAಗಯ್ಯ ಏಣಗಿಮಠ ಪ್ರಾರ್ಥಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಸುಧೀಂದ್ರ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ವಿದ್ಯಾರ್ಥಿ ಕಾರ್ಯದರ್ಶಿ ಕುಮಾರಿ ಸರೋಜಾ ನಾಯಕ ವಂದಿಸಿದರು. ಕುಮಾರಿ ತೇಜಸ್ವಿನಿ ಮೊಹರೆ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭದಲ್ಲಿ ಮಹಾವಿದ್ಯಾಲಯದ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮಹಾರಾಜರು ಅರಮನೆ ಕಟ್ಟಿಸಿದ್ದು ಜನರ ತೆರಿಗೆಯ ಹಣದಿಂದಲೇ, ಎಲ್ಲವೂ ಜನರಿಗೇ ಸೇರಬೇಕು: ಯತೀಂದ್ರ ಸಿದ್ದರಾಮಯ್ಯ

Spread the loveಮೈಸೂರು: ಮಹಾರಾಜರು ಅರಮನೆ ಕಟ್ಟಿಸಿದ್ದು ಕೂಡ ಜನರ ತೆರಿಗೆಯ ಹಣದಿಂದಲೇ, ಹೀಗಾಗಿ ಎಲ್ಲವೂ ಜನರಿಗೇ ಸೇರಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ