Breaking News

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ವಿದೇಶಿಗನ ಕೊಲೆ ಕೇಸ್: ಮೂವರಿಗೆ ಗಲ್ಲು ಶಿಕ್ಷೆ

Spread the love

ಕೊಪ್ಪಳ: ಹಂಪಿ  ಬಳಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ವಿದೇಶಿ ಪ್ರವಾಸಿಗನ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೋರ್ಟ್ ಮರಣದಂಡನೆ ವಿಧಿಸಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಇಸ್ರೇಲ್ ಮಹಿಳೆ ಮೇಲಿನ ಅತ್ಯಾಚಾರ ಮತ್ತು ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣ ಸಂಬಂಧ ಗಂಗಾವತಿ ನ್ಯಾಯಾಲಯವು, ಇದೇ ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಇಂದು (ಫೆಬ್ರವರಿ 16)ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷಿ ವಿಧಿಸಿ ಆದೇಶ ಹೊರಡಿಸಿದ್ದಾರೆ. ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿಗಳು.

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಈ ಘಟನೆ ನಡೆದ ಕೇವಲ 9 ತಿಂಗಳಲ್ಲೇ ಗಂಗಾವತಿ ಕೋರ್ಟ್​ ಐತಿಹಾಸಿಕ ತೀರ್ಪು ಪ್ರಕಟಿಸಿದೆ.  ಈ ಮೂಲಕ ನ್ಯಾಯಾಂಗದ ದಕ್ಷತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ನ್ಯಾಯಮೂರ್ತಿ ಸದಾನಂದ ನಾಗಪ್ಪ ನಾಯಕ್ ಅವರು ತೀರ್ಪು ಪ್ರಕಟಿಸಿ, ಇಂತಹ ಕ್ರೂರ ಅಪರಾಧಗಳಿಗೆ ಸಮಾಜದಲ್ಲಿ ಯಾವುದೇ ಸ್ಥಳವಿಲ್ಲ ಎಂಬ ಸಂದೇಶವನ್ನು ನೀಡಿದ್ದಾರೆ.

2025ರ ಮಾರ್ಚ್ ತಿಂಗಳಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪೂರ ಬಳಿ ಈ ಪೈಶಾಚಿಕ ಕೃತ್ಯ ನಡೆದಿತ್ತು. ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅಮಾನವೀಯವಾಗಿ ಅತ್ಯಾಚಾರವೆಸಗಿದ್ದರು. ಈ ಘಟನೆಯಲ್ಲಿ ವಿದೇಶಿ ಯುವಕನ ಕೊಲೆಯಾಗಿತ್ತು. ಈ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಜಿಲ್ಲೆಯ ಪ್ರವಾಸೋದ್ಯಮದ ಮೇಲೆ ಕರಿನೆರಳು ಬಿದ್ದಿತ್ತು.  ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ  ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಹಾಗೂ ಶರಣಪ್ಪ ಮೂವರ ಮೇಲೆ  ಅತ್ಯಾಚಾರ, ಕೊಲೆ ಪ್ರಕರಣ ದಾಖಲಾಗಿತ್ತು. ಬಳಿಕ  ಪೊಲೀಸರು ಅತ್ಯಂತ ಚುರುಕಾಗಿ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬ ಮೂವರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಗಂಗಾವತಿಯ ಹೆಚ್ಚುವರಿ ಸತ್ರ ನ್ಯಾಯಾಲಯವು, ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಈ ಮೂವರೂ ದೋಷಿಗಳು ಎಂದು ಆದೇಶಿಸಿತ್ತು.


Spread the love

About Laxminews 24x7

Check Also

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Spread the loveನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ