ತಾಲೂಕಿನ ಬಟಕುರ್ಕಿ ಇಂದಿರಾಗಾಂಧಿ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಬುಧವಾರ ಭೇಟಿ ನೀಡಿ ಮೂಲಸೌಕರ್ಯ ಹಾಗೂ ವ್ಯವಸ್ಥೆ ಪರಿಶೀಲಿಸಿದರು.
ಶಾಲೆಯಲ್ಲಿನ ಬೋಧನಾ ಕೊಠಡಿ, ವಸತಿ ಕಟ್ಟಡ ಹಾಗೂ ವಿಜ್ಞಾನ ಪ್ರಯೋಗಾಲಯ ಸೇರಿದಂತೆ ಮೂಲ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಪರಿತಪಿಸುತ್ತಿರುವ ಕುರಿತು ಜು.11ರಂದು “ವಸತಿ ಶಾಲೆಗೆ ಬೇಕು ಸೌಕರ್ಯ’ ಶೀರ್ಷಿಕೆಯಡಿ ವಿಜಯವಾಣಿ ವಿಶೇಷ ವರದಿ ಪ್ರಕಟಿಸಿತ್ತು.
ಪರಿಶೀಲನೆ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಕನ್ನೊಳ್ಳಿ ಪಠ್ಯಾಭ್ಯಾಸ, ಸ್ಪರ್ಧಾತ್ಮಕ ಪರೀೆಗಳ ಸಿದ್ಧತೆ ಹಾಗೂ ಶಾಲೆಯಲ್ಲಿನ ಸೌಲಭ್ಯ ಕುರಿತು ಮಾಹಿತಿ ಪಡೆದು ಮಕ್ಕಳ ಶಿಕ್ಷಣ ಹಾಗೂ ಆರೋಗ್ಯ ಕಾಳಜಿ ವಹಿಸಬೇಕು. ಕುಡಿಯುವ ನೀರು, ವಿದ್ಯುತ್, ಶೌಚಾಲಯ, ಆಹಾರದ ವ್ಯವಸ್ಥೆ ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸಿಬ್ಬಂದಿಗೆ ನಿರ್ದೇಶನ ನೀಡಿದರು. ಪ್ರಾಚಾರ್ಯ ಜಿ.ಎಚ್.ಮುದಕವಿ ಹಾಗೂ ಸಿಬ್ಬಂದಿ ಇದ್ದರು.
Laxmi News 24×7