Breaking News

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Spread the love

ಚಿಕ್ಕಮಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಅವರಿಗೆ ಅಗಾಧವಾದ ರಾಜಕೀಯದ ಅನುಭವ ಹುಮ್ಮಸ್ಸು ಹಾಗೂ ಹುರುಪು ಇದೆ. ಆದರೆ ಕೊರತೆ ಇರುವುದು ಇಚ್ಚಾಶಕ್ತಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಶುಭಹಾರೈಸುವುದರ ಜೊತೆ ಕಿವಿಮಾತು ಕೂಡ ಹೇಳಿದ್ದಾರೆ.

ಇಂದು ಡಿಸಿಸಿ ಬ್ಯಾಂಕಿನಲ್ಲಿ ಮಾತನಾಡಿದ ಅವರು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಅಭಿನಂದನೆ ಸಲ್ಲಿಸುವುದರ ಜೊತೆ ಕೆಲ ಸಲಹೆಗಳನ್ನು ನೀಡಿದ್ದಾರೆ. ವೈಯಕ್ತಿಕ ರಾಜಕಾರಣ ಹಿತಾಸಕ್ತಿ ಹಾಗೂ ಪಕ್ಷದ ಹಿತಾಸಕ್ತಿಗಿಂತ ರಾಜ್ಯದ ಹಿತವೇ ಮುಖ್ಯ ಎಂಬ ಆದ್ಯತೆ ಅವರದಾದರೆ ಮಾತ್ರ ಉತ್ತಮ ಕೆಲಸ ಮಾಡಲು ಸಾಧ್ಯ. ಇಲ್ಲದಿದ್ದರೆ ಜನ ಯಾವುದೇ ನಿರೀಕ್ಷೆ ಇಟ್ಟುಕೊಳ್ಳಲು ಸಾಧ್ಯವಿಲ್ಲ ಎಂದರು.

ನೂತನ ಮುಖ್ಯಮಂತ್ರಿಯವರ ಆದ್ಯತೆಗಳು ಸದಾ ರಾಜ್ಯದ ಹಿತಾಸಕ್ತಿ ಮತ್ತು ಅಭಿವೃದ್ಧಿಗೆ ಪೂರಕವಾಗಿರಲಿ. ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ದೂರದೃಷ್ಟಿಯ ಯೋಜನೆಗಳು ಜಾರಿಗೆ ಬರಬೇಕು ಮತ್ತು ಯಾವುದೇ ಕಾರಣಕ್ಕೂ ಸಾಮಾಜಿಕ ಅನ್ಯಾಯವಾಗದಂತೆ ಆಡಳಿತ ನಡೆಸಬೇಕು ಎಂದು ಹೇಳಿದರು.

ರಾಜಕೀಯ ಹಿತಾಸಕ್ತಿ ಯಾವತ್ತು ರಾಜ್ಯದ ಹಿತವನ್ನ ಮೀರಬಾರದು. ಕಾಂಗ್ರೆಸ್  ಎಲ್ಲಿವರೆಗೆ ತನ್ನ ನೀತಿ ಬದಲಿಸಿಕೊಳ್ಳುವುದಿಲ್ಲವೋ ಅಲ್ಲಿವರೆಗೆ ತುಷ್ಟೀಕರಣ ರಾಜಕಾರಣ ಮುಂದುವರಿಯುತ್ತಲೇ ಇರುತ್ತದೆ. ಕೇವಲ ಹಣವೇ ಪ್ರಧಾನವಾದಾಗ ಆಡಳಿತದಲ್ಲಿ ಬಿಗಿ ತಪ್ಪುವುದು ಸಹಜ. ಹಾಗಾಗದಂತೆ ಎಚ್ಚರ ವಹಿಸಿ ನೂತನ ಮುಖ್ಯಮಂತ್ರಿಗಳು ಜನರ ಮನ್ನಣೆ ಗಳಿಸಲಿ ಎಂದು ಶುಭ ಹಾರೈಸಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ