Breaking News

ಚುನಾವಣೆ ಎದುರಿಸಲು ಪಕ್ಷವನ್ನು ತಳಮಟ್ಟದಿಂದಲೇ ಸಂಘಟಿಸಬೇಕು

Spread the love

ಬೆಳಗಾವಿ: ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೇರಿದಂತೆ ವಿವಿಧ ಚುನಾವಣೆ ಎದುರಿಸಲು ಪಕ್ಷವನ್ನು ತಳಮಟ್ಟದಿಂದಲೇ ಸಂಘಟಿಸಬೇಕು ಎಂದು ಕರ್ನಾಟಕ ಕಾಂಗ್ರೆಸ್ ಪ್ರದೇಶ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ  ವಿನಯಕುಮಾರ ಸೊರಕೆ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೆಳಗಾವಿ, ಗ್ರಾಮೀಣ ಜಿಲ್ಲಾ ಪ್ರಚಾರ ಸಮಿತಿ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದೆ ಎಂದು ನಿರ್ಲಕ್ಷಿಸಬಾರದು. ಪದಾಧಿಕಾರಿಗಳು, ಕಾರ್ಯಕರ್ತರು ಅಧಿಕಾರದ ಬದಲಾಗಿ ಪಕ್ಷಕ್ಕಾಗಿ ದುಡಿಯುವ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು.
ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಯುತ್ತಿದ್ದು, ಪಟ್ಟಿಯಿಂದ ಯಾರು ಕೈಬಿಟ್ಟು ಹೋಗದಂತೆ ಎಚ್ಚರ ವಹಿಸಬೇಕು. ಈ ಕುರಿತು ತಿಳಿವಳಿಕೆ ನೀಡುವ ಕೆಲಸ ಮಾಡಬೇಕು. ಸರ್ಕಾರದ ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕೆಲಸ ಕುರಿತು ಮನೆಮನೆಗೆ ತಿಳಿಸುವ ಕೆಲಸ ಮಾಡಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಿಗೆ ಬೆಲೆ ಇದೆ. ಸಣ್ಣಪುಟ್ಟ ವ್ಯತ್ಯಾಸ ಬಗ್ಗೆ ಬೇಸರ ಮಾಡಿಕೊಳ್ಳಬಾರದು. ನಿರಂತರ ಜನಸಂಪರ್ಕದೊಂದಿಗೆ ಪಕ್ಷವನ್ನು ಗಟ್ಟಿಗೊಳಿಸೋಣ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ, ಪಕ್ಷ ಬಲಿಷ್ಠಗೊಂಡರೆ ಎಲ್ಲ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ. ಈಗಿನಿಂದಲೇ ತಳಮಟ್ಟದಲ್ಲಿ ಸಂಘಟನೆ ಆರಂಭಿಸಬೇಕು ಎಂದರು.
ರಾಜಾಸಲೀಂ ಕಾಶೀಮನವರ, ಮುನೀರ್, ಶಂಭು ಶೆಟ್ಟಿ, ಸುಧೀರ ಕುಮಾರ ಮುರೊಳಿ ಇತರರಿದ್ದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ