Breaking News

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Spread the love

ಬೆಳಗಾವಿ: ಬಸನಗೌಡ ಪಾಟೀಲ್‌ ಯತ್ನಾಳ್‌ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ  ಬರುತ್ತಾರೆ ಎಂದು ಅಥಣಿಯಲ್ಲಿ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.

ಉಚ್ಚಾಟನೆಯಾದ ದಿನದಿಂದ ನಾನು ಯತ್ನಾಳ್‌ ಅವರನ್ನು ಮರಳಿ ಬಿಜೆಪಿಗೆ (BJP) ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಒಂದು ವೇದಿಕೆ ಸಜ್ಜಾಗಿದೆ ಎಂದರು.

ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಯತ್ನಾಳ್ ಪ್ರಚಾರ ನಡೆಸಿದ್ದು ಒಳ್ಳೆಯ ಬೆಳವಣಿಗೆ. ಯತ್ನಾಳ್ ಪ್ರಚಾರದಿಂದ ನಮ್ಮ ಅಭ್ಯರ್ಥಿಗೆ ಲಾಭವಾಗಬಹುದು ಎಂದು ಭವಿಷ್ಯ ನುಡಿದರು.

ಯತ್ನಾಳ್ ಬಿಜೆಪಿಗೆ ಬಂದರೆ ಒಳ್ಳೆಯದು. ಹಿಂದೂ ಸಂಘಟನೆ ಮತ್ತು ಬಿಜೆಪಿ ಮತ ಕ್ರೋಢಿಕರಣಕ್ಕೆ ಅನುಕೂಲವಾಗುತ್ತದೆ. ಉಪಚುನಾವಣೆಯಲ್ಲಿ ನಮ್ಮ ಪಕ್ಷದವರು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿದ್ದು ಗೆಲ್ಲುವ ಆಶಾಭಾವನೆಯನ್ನು ನಾವು ಹೊಂದಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಸಾವಿನಲ್ಲಿಯೂ ಒಂದಾದ ಗಂಡ, ಹೆಂಡತಿ,ಬೆಳಗಾವಿ ಜಿಲ್ಲೆಯಲ್ಲಿ ಹ್ರದಯವಿದ್ರಾವಕ ಘಟನೆ

Spread the loveಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಮನಸ್ಸು ಕಲುಕುವ ದಾರುಣ ಘಟನೆ ಸಂಭವಿಸಿದ್ದು, ಪತಿ, ಪತ್ನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ