Breaking News

ದೇಶಾಭಿಮಾನದ ಪ್ರತೀಕ ತ್ರಿವರ್ಣ ಧ್ವಜ

Spread the love

ನಿಪ್ಪಾಣಿ: ದೇಶಕ್ಕೆ ಸ್ವಾತಂತ್ರ‍್ಯ ದೊರಕಿಸಿಕೊಡುವಲ್ಲಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನವನ್ನು ಯುವಪೀಳಿಗೆ ಅರಿತುಕೊಳ್ಳಬೇಕು ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.
ನಗರದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಂಗಳವಾರ ತಿರಂಗಾ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದ್ದು, ಜಾಗತಿಕ ಮಟ್ಟದಲ್ಲಿ ಭಾರತ ಬಲಿಷ್ಠವಾಗಿದೆ. ಎಲ್ಲರೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶಾಭಿಮಾನ ವ್ಯಕ್ತಪಡಿಸಬೇಕು ಎಂದರು.
ರ‍್ಯಾಲಿಯಲ್ಲಿ ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು ತ್ರಿವರ್ಣ ಧ್ವಜ ಹಿಡಿದು ಘೋಷಣೆ ಕೂಗಿದರು.
ಬಿಜೆಪಿ ಗ್ರಾಮೀಣ ಸ್ಥಳೀಯ ಘಟಕದ ಅಧ್ಯಕ್ಷ ಬಾಳಾಸಾಹೇಬ ಕದಂ, ನಗರ ಘಟಕದ ಅಧ್ಯಕ್ಷ ರಾಜು ಗುಂದೇಶಾ, ಮಹಿಳಾ ಮೋರ್ಚಾ ಅಧ್ಯಕ್ಷೆ ಯೋಗಿತಾ ಘೋರ್ಪಡೆ, ಲಕ್ಷ್ಮಿ ಖೋತ, ಹಾಲಶುಗರ್ಸ್ ಉಪಾಧ್ಯಕ್ಷೆ ಗೀತಾ ಪಾಟೀಲ, ಜಯವಂತ ಬಾಟಲೆ, ಸುನೀಲ ಪಾಟೀಲ, ಮಹಾಲಿಂಗೇಶ ಕೊಠಿವಾಲೆ, ಪ್ರಕಾಶ ಶಿಂಧೆ, ಸಂತೋಷ ಸಾಂಗಾವಕರ, ದೀಪಕ ಮಾನೆ, ಬಂಡಾ ಘೋರ್ಪಡೆ, ಸಾಗರ ಮಿರ್ಜೆ, ರವೀಂದ್ರ ಇಂಗಳೆ ಇತರರಿದ್ದರು.

Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ