Breaking News

ಈ ಸರ್ಕಾರವೂ ಬೀಳುತ್ತೆ, ಪ್ರಜಾಪ್ರಭುತ್ವ ಮರುಸ್ಥಾಪನೆಯಾಗಲಿದೆ: CJP ಪ್ರತಿಭಟನೆ ಬೆನ್ನಲ್ಲೇ ರಾಹುಲ್‌ ಗಾಂಧಿ ಪ್ರತಿಕ್ರಿಯೆ

Spread the love

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆ ಕೊಡೋದಷ್ಟೇ ಅಲ್ಲ, ಈ ಸರ್ಕಾರ ಶೀಘ್ರವೇ ಬೀಳಲಿದೆ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಈ ಕುರಿತು ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೋ ತುಣುಕನ್ನು ರಾಹುಲ್‌ ಗಾಂಧಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆ ನಡೆಸಲು ಮುಂದಾಗಿರುವ ಸಂದರ್ಭದಲ್ಲೇ ರಾಹುಲ್‌ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ದೇಶಾದ್ಯಂತ ನಡೆಯುತ್ತಿರುವ SIR ಪ್ರಕ್ರಿಯೆಯನ್ನು ವಿರೋಧಿಸಿ ಈ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕಾಂಗ್ರೆಸ್‌ ಈ ಆಂದೋಲನಕ್ಕೆ ಬೆಂಬಲ ನೀಡುತ್ತಿಲ್ಲ ಎಂಬ ಟೀಕೆಗಳೂ ಕೇಳಿಬಂದಿವೆ.

ದೆಹಲಿ ಪೊಲೀಸ್‌ ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾಗಿದೆ. ಈ ವೇಳೆ ರಾಹುಲ್‌ ಗಾಂಧಿಯವರ ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ ಉಂಟುಮಾಡಿದೆ.

ರಾಹುಲ್‌ ಗಾಂಧಿಯ ನಡೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌, ರಾಹುಲ್‌ ಗಾಂಧಿ ಮತ್ತು ಅರವಿಂದ್‌ ಕೇಜ್ರಿವಾಲ್‌ ವಿದೇಶಿ ಶಕ್ತಿಗಳ ಸೂಚನೆಯಂತೆ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಅಭಿವೃದ್ಧಿ ಹೊಂದುತ್ತಿರುವುದನ್ನು ಇಂಡಿಯಾ ಮೈತ್ರಿಕೂಟದ ನಾಯಕರು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. 

ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿರುವ ನಬಿನ್‌, ದೇಶದ 140 ಕೋಟಿ ಜನರ ಸ್ಥಿರತೆಗೆ ಧಕ್ಕೆ ತರುವ ಪ್ರಯತ್ನಗಳನ್ನು ಸರ್ಕಾರ ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

ದೆಹಲಿಯಲ್ಲಿ ಬಿಗಿ ಭದ್ರತೆ
ಜಂತರ್‌ ಮಂತರ್‌ನಲ್ಲಿ CJP ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಭದ್ರತೆ ಹೆಚ್ಚಿಸಲಾಗಿದೆ. ದೆಹಲಿಗೆ ಆಗಮಿಸಿದ ಬಳಿಕ CJP ಸಂಸ್ಥಾಪಕ ಅಭಿಜೀತ್‌ ದಿಪ್ಕೆ ಹಾಗೂ ಸೌರವ್‌ ದಾಸ್‌ ಮತ್ತು ಅಶುತೋಷ್‌ ರಂಕಾ ಅವರನ್ನು ಪೊಲೀಸರು ವಿಮಾನದಿಂದಲೇ ವಶಕ್ಕೆ ಪಡೆದಿದ್ದಾರೆ. 

ಕಾನೂನು ಮತ್ತು ಸುವ್ಯವಸ್ಥೆಯ ಕಾರಣ ನೀಡಿ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದಾರೆ. SIR ಪ್ರಕ್ರಿಯೆ, ಚುನಾವಣಾ ಆಯೋಗದ ಕಾರ್ಯವೈಖರಿ ಮತ್ತು ವಿರೋಧ ಪಕ್ಷಗಳ ಪ್ರತಿಭಟನೆ ವಿಚಾರವಾಗಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಪ್ರಕರಣ – ಪಿಎಸ್‌ಐ ವಿನಯ್‌ಗೆ ಸಂಕಷ್ಟ? – ತನಿಖಾ ತಂಡದ ವಿರುದ್ಧವೇ ಇಲಾಖಾ ತನಿಖೆ

Spread the loveಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ಬೆನ್ನಲ್ಲೇ ಪಿಎಸ್‌ಐ ವಿನಯ್‌ ಅವರಿಗೆ ಸಂಕಷ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ