ಶಿವಮೊಗ್ಗ: ಶರಾವತಿ ಕಣಿವೆ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ಹಿನ್ನೆಲೆ ಶರಾವತಿ ನದಿಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದ್ದು, ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತಕ್ಕೆ ಜೀವಕಳೆ ಬಂದಿದೆ.
ಧುಮ್ಮಿಕ್ಕಿ ಹರಿಯುತ್ತಿರುವ ಜೋಗ ಜಲಪಾತವನ್ನು ನೋಡಲು ಪ್ರವಾಸಿಗರ ದಂಡೇ ಬರುತ್ತಿದೆ. ಇಂದು ಭಾನುವಾರವಾಗಿರುವುದರಿಂದ ಜೋಗಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದಾರೆ. ಶನಿವಾರ ಸಹ ಸಾವಿರಾರು ಮಂದಿ ಪ್ರವಾಸಿಗರು ಭೇಟಿ ನೀಡಿದ್ದರು.
ಮಳೆ ಹಾಗೂ ಮಂಜಿನಾಟದ ನಡುವೆ ಜೋಗದ ಸಿರಿಯನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಿದ್ದಾರೆ. ರಾಜ, ರಾಣಿ, ರೋರರ್, ರಾಕೆಟ್ ಫಾಲ್ಸ್ನಲ್ಲಿ ಹಾಲ್ನೊರೆಯಂತೆ ನೀರು ಉಕ್ಕಿ ಹರಿಯುತ್ತಿದೆ.
Laxmi News 24×7