Breaking News

ಉರುಳಿಗೆ ಸಿಕ್ಕ ಚಿರತೆಯನ್ನು ಸುಟ್ಟು ವಿಡಿಯೋ ಹಂಚಿಕೊಂಡ ಯುವಕರು – ಮೂವರು ಅರೆಸ್ಟ್‌

Spread the love

ತುಮಕೂರು: ಉರುಳಿಗೆ ಸಿಲುಕಿ ಸಾವನ್ನಪ್ಪಿದ್ದ ಚಿರತೆಯನ್ನು  ಅರಣ್ಯಾಧಿಕಾರಿಗಳಿಗೆ ತಿಳಿಸದೇ ಗ್ರಾಮಸ್ಥರೇ ಸುಟ್ಟು ಹಾಕಿದ ಘಟನೆ ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ಚಿರತೆ ಸುಡುವ ವಿಡಿಯೋ ವೈರಲ್‌ ಆಗಿದ್ದು, ಮೂವರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.

ಗೌರಗೊಂಡನಹಳ್ಳಿಯ ಜಿ.ಡಿ.ಶಿವಕುಮಾರ್, ನಾರಾಯಣಪ್ಪ ಹಾಗೂ ಚಂದ್ರಶೇಖರ್ ಬಂಧಿತ ಆರೋಪಿಗಳು. ನಾರಾಯಣಪ್ಪನ ಹೊಲಕ್ಕೆ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಉರುಳು ಹಾಕಿದ್ದ. ಇತ್ತೀಚೆಗೆ ಉರುಳಿಗೆ ಚಿರತೆ ಸಿಕ್ಕು ಸಾವನ್ನಪ್ಪಿತ್ತು. ಬಳಿಕ ಗ್ರಾಮಸ್ಥರು ಚಿರತೆಯನ್ನು ಸುಟ್ಟು ಹಾಕಿದ್ದರು.

ಸತ್ತ ಚಿರತೆ ಸುಡುವುದನ್ನು ಗ್ರಾಮದ ಕೆಲವು ಯುವಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ವಿಡಿಯೋ ಆಧರಿಸಿ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.


Spread the love

About Laxminews 24x7

Check Also

ಕೇಂದ್ರ ಸಚಿವರಾಗಿ ಟೋಲ್‌ ಕಟ್ಟಬೇಡಿ ಅಂತ ಪ್ರಚೋದನೆ ಕೊಡೋದು ಸರಿಯಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

Spread the loveಬೆಂಗಳೂರು: ಕೇಂದ್ರ ಸಚಿವರಾಗಿ ಕುಮಾರಸ್ವಾಮಿ ಅವರು ಟೋಲ್ ಕಟ್ಟಬೇಡಿ ಅಂತ ಪ್ರಚೋದನೆ ಮಾಡೋದು ಸರಿಯಲ್ಲ ಅಂತ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ