Breaking News

ಪಾಗಲ್‌ ಪ್ರೇಮಿ ನಾಗೇಂದ್ರನಿಗೆ ನಾಡಬಾಂಬ್‌ ತಯಾರಿಸಿಕೊಟ್ಟ ಶಂಕೆ – ಮೂವರು ವಶಕ್ಕೆ

Spread the love

ಕಾರವಾರ: ತುಮಕೂರಿನಲ್ಲಿ ನಾಡಬಾಂಬ್‌ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪಾಗಲ್‌ ಪ್ರೇಮಿ ನಾಗೇಂದ್ರನ ಪ್ರಕರಣಕ್ಕೆ ಸಂಬಂಧಿಸಿದಂತೆ 60 ಜನರನ್ನು ಅಂಕೋಲ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದರಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಹೊನ್ನಾವರದ  ಚಂದಾವರ ಮೂಲದ ಓರ್ವ ಹಾಗೂ ಸರಳೆಬೈಲಿನ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ನಾಗೇಂದ್ರನಿಗೆ ನಾಡಬಾಂಬ್ ತಯಾರಿಸಿ ಕೊಟ್ಟಿರುವ ಶಂಕೆಯ ಮೇಲೆ ವಶಕ್ಕೆ ಪಡೆಯಲಾಗಿದೆ. ಸ್ನೇಹಿತರು ಹಾಗೂ ಸಂಬಂಧಿಗಳ ವಿಚಾರಣೆ ವೇಳೆ ಮೂವರಿಂದ ನಾಡಬಾಂಬ್‌ ಖರೀದಿಸಿರುವುದು ದೃಢಪಟ್ಟಿದೆ.

ಬಾಂಬ್ ಖರೀದಿ ವೇಳೆ ನಾಗೇಂದ್ರ ಮೊಬೈಲ್‌ ಬಳಕೆ ಮಾಡದೇ ಖುದ್ದು ಭೇಟಿಯಾಗಿ ಮಾತುಕತೆ ನಡೆಸಿದ್ದ ಎಂದು ತಿಳಿದು ಬಂದಿದೆ. ವಶಕ್ಕೆ ಪಡೆದ ವ್ಯಕ್ತಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಅಂಕೋಲ ಠಾಣೆ ಪೊಲೀಸರು ಹಾಗೂ ತುಮಕೂರು ಪೊಲೀಸರು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.


Spread the love

About Laxminews 24x7

Check Also

ವಿಧಾನ ಪರಿಷತ್‌ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ

Spread the love ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಇಂದು ಸಲೀಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ