Breaking News

ಟ್ರಕ್ ಡಿಕ್ಕಿ ಹೊಡೆದು ಮೂವರು ಬೈಕ್ ಸವಾರರ ದಾರುಣ ಸಾವು

Spread the love

ಕಲಬುರಗಿ: ಬೈಕ್‌ಗೆ ಅಪರಿಚಿತ ಟ್ರಕ್ ಡಿಕ್ಕಿ ಹೊಡೆದು ಮೂವರು ಬೈಕ್ ಸವಾರರು ಸಾವನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ  ಪಟ್ಟಣದ ಹಳೇ ಆರ್‌ಟಿಓ ಕಚೇರಿ ಬಳಿ ತಡರಾತ್ರಿ ನಡೆದಿದೆ.

ಮೃತರನ್ನು ಆಳಂದ ಪಟ್ಟಣದ ನಿವಾಸಿಗಳಾದ ಶ್ರೀಕಾಂತ್ (25), ಗುರುನಾಥ್ (26) ಹಾಗೂ ಶಶಿಕಾಂತ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ವಿಂಡ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ತಡರಾತ್ರಿ ಕೆಲಸ ಮುಗಿಸಿಕೊಂಡು ಈ ಮೂವರು ಒಂದೇ ಬೈಕ್‌ನಲ್ಲಿ ಆಳಂದ ಮನೆಗೆ ವಾಪಸ್ಸಾಗುತ್ತಿದ್ದರು. ಹಳೇ ಆರ್‌ಟಿಓ ಕಚೇರಿ ಬಳಿ ಬರುತ್ತಿದ್ದಂತೆಯೇ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಒಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದದಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಶ್ರೀಕಾಂತ್ ಮತ್ತು ಗುರುನಾಥ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನೋರ್ವ ಸವಾರ ಶಶಿಕಾಂತ್ ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರು. ತಕ್ಷಣವೇ ಅವರನ್ನು ಕಲಬುರಗಿಯ ಜಿಮ್ಸ್ (GIMS) ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಶಶಿಕಾಂತ್ ಕೂಡ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ, ವ್ಯವಸ್ಥೆಯೊಳಗೇ ಹೋರಾಟ: ರಾಹುಲ್ ಗಾಂಧಿ

Spread the loveನವದೆಹಲಿ: ವಿರೋಧ ಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ. ಬದಲಾಗಿ, ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕವೇ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಹೋರಾಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ