Breaking News

ನೈಟ್‌ ಔಟ್‌ ವೇಳೆ ಬೈಕ್‌ಗೆ ಲಾರಿ ಡಿಕ್ಕಿ – ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Spread the love

ನೆಲಮಂಗಲ: ಬಿರಿಯಾನಿ ತಿನ್ನಲು ಹೋಗ್ತಿದ್ದಾಗ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಅಭಿಲಾಷ್ (21), ಮನೋಜ್ (21) ಹಾಗೂ ನವೀನ್ (21) ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಶುಕ್ರವಾರ (ಮಾ.27) ರಾತ್ರಿ ಬಿರಿಯಾನಿ ತಿನ್ನಲು ಮೂವರು ಒಂದೇ ಬೈಕ್‌ನಲ್ಲಿ ಕುಣಿಗಲ್ ಕಡೆ ಹೋಗುತ್ತಿದ್ದರು. ಈ ವೇಳೆ ಮಾಗಡಿ ತಾಲ್ಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ  ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ( …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ