Breaking News

ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ನಾಪತ್ತೆ

Spread the love

ವಿಜಯನಗರ: ಮೀನು ಹಿಡಿಯಲು ತುಂಗಭದ್ರಾ ನದಿಗೆ (Tungabhadra River) ತೆರಳಿದ್ದ ಮೂವರು ಯುವಕರು ಏಕಾಏಕಿ ನಾಪತ್ತೆಯಾಗಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದ ಬಳಿ ನಡೆದಿದೆ. ನಿನ್ನೆ ಮಧ್ಯಾಹ್ನ ಮೀನು ಹಿಡಿಯಲು ಹೋಗಿದ್ದವರು ಮನೆಗೆ ವಾಪಸ್‌ ಬಾರದ ಹಿನ್ನೆಲೆ ಕುಟುಂಬಸ್ಥರು ಆತಂಕಗೊಂಡಿದ್ದಾರೆ.

ನಾಪತ್ತೆಯಾದವರನ್ನು ರಾಜ (22), ಯಮನಪ್ಪ (20) ಹಾಗೂ ಅಜ್ಜಪ್ಪ (26) ಎಂದು ಗುರುತಿಸಲಾಗಿದೆ. ಮೂವರು ತುಂಗಭದ್ರಾ ನದಿಯ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ.

ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಗಾಬರಿಗೊಂಡಿದ್ದಾರೆ. ಬಳಿಕ ಮೂವರು ನಾಪತ್ತೆಯಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದ್ದಾರೆ. ಸದ್ಯ ಎಸ್‌ಡಿಆರ್‌ಎಫ್ ತಂಡವೂ ತುಂಗಭದ್ರಾ ನದಿ ಹಿನ್ನೀರಿನಲ್ಲಿ ಶೋಧ ಕಾರ್ಯ ಮುಂದುವರಿಸಿದೆ.

ಹಗರಿಬೊಮ್ಮನಹಳ್ಳಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿ ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ