Breaking News

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the love

ಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ಮೇಟಿ ಕುಟುಂಬದವರಿಗೆ ಟಿಕೆಟ್ ಕೊಡುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

‘ಬಾಗಲಕೋಟೆಯಲ್ಲಿ ಗೆಲ್ಲಲು ಎಲ್ಲ ತಯಾರಿ ಮಾಡಿದ್ದೇವೆ. ಪಕ್ಷದ ಹೈಕಮಾಂಡ್ ಹಾಗೂ ಕುಟುಂಬದವರ ನಿರ್ಧಾರ ಅಗತ್ಯ. ಮೇಟಿ ಕುಟುಂಬದ ಒಬ್ಬರಿಗೆ ಟಿಕೆಟ್ ನೀಡುತ್ತೇವೆ’ ಎಂದು ಇಲ್ಲಿ ಪತ್ರಕರ್ತರೊಂದಿಗೆ ತಿಳಿಸಿದರು.

‘ನಿಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿದೆಯೇ’ ಎಂಬ ಪ್ರಶ್ನೆಗೆ, ‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಯಾವಾಗಲೂ ಚರ್ಚೆ ನಡೆಯುತ್ತದೆ. ಅದು ಇನ್ನೂ ನಿರ್ಧಾರಗೊಂಡಿಲ್ಲ’ ಎಂದು ಉತ್ತರಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ