ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಹುಲಿ ದಾಳಿಯ ಆತಂಕ ಎದುರಾಗಿದೆ. ಚೆಯ್ಯಂಡಾಣೆ ಸಮೀಪದ ನರಿಯಂದಡ ಗ್ರಾಮದಲ್ಲಿ ಹುಲಿಯೊಂದು ಹಸುವಿನ ಮೇಲೆ ದಾಳಿ ನಡೆಸಿ, ಹಸುವಿನ ಅರ್ಧಭಾಗವನ್ನು ತಿಂದು ಹಾಕಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಘಟನೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಹುಲಿಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ನರಿಯಂದಡ ಗ್ರಾಮದ ನಿವಾಸಿ ಜೈಶಂಕರ್ ಅವರಿಗೆ ಸೇರಿದ ಹಸು ಹುಲಿ ದಾಳಿಗೆ ಬಲಿಯಾಗಿದೆ. ಹಸುವನ್ನು ಕೊಂದು ಅದರ ಅರ್ಧಭಾಗವನ್ನು ತಿಂದು ಹಾಕಿದೆ. ಘಟನೆ ನಡೆದ ಸ್ಥಳದ ಸಮೀಪವೇ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಹುಲಿ ಸಂಚಾರದಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಜಾನುವಾರುಗಳ ರಕ್ಷಣೆಗೆ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
Laxmi News 24×7