ಚಿಕ್ಕಮಗಳೂರು: ಕೆಮ್ಮಣ್ಣುಗುಂಡಿ ಬಳಿ ಹುಲಿಯೊಂದು ಕಾಣಿಸಿಕೊಂಡಿದೆ. ಹುಲಿಯ ಓಡಾಟದ ದೃಶ್ಯಗಳು ಪ್ರವಾಸಿಗರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಈ ಭಾಗಕ್ಕೆ ತೆರಳುವ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕೆಮ್ಮಣ್ಣುಗುಂಡಿ, ಕಲ್ಲತ್ತಿಗರಿ, ಹೆಬ್ಬೆ ಫಾಲ್ಸ್ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಭಾಗದಲ್ಲಿ ಹುಲಿ ಓಡಾಟ ಕಂಡು ಬಂದಿದೆ. ರಸ್ತೆ ಬದಿಯಲ್ಲೇ ಹುಲಿಯನ್ನು ಕಂಡು ಪ್ರವಾಸಿಗರಲ್ಲಿ ಆತಂಕ ಸೃಷ್ಟಿಯಾಗಿದೆ.
ಹುಲಿಯ ಓಡಾಟದಿಂದ ಸ್ಥಳೀಯರು ಹಾಗೂ ಪ್ರವಾಸಿಗರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನೂ ಈ ಭಾಗದ ಜನರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
Laxmi News 24×7