Breaking News

ನಾಳೆ ಕೆಎಸ್ಆರ್‌ಪಿ ಪರೀಕ್ಷೆಗೆ ಬಿಗಿ ಭದ್ರತೆ-ಕೆಇಎ

Spread the love

ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್  ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೆ.20ರಂದು ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಎಲ್ಲೆಡೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರು ಸೇರಿದಂತೆ ಒಟ್ಟು 8 ಜಿಲ್ಲೆಗಳ 333 ಕೇಂದ್ರಗಳಲ್ಲಿ ಮಿಕ್ಕುಳಿದ ವೃಂದ ಹಾಗೂ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ನಾಲ್ಕು ಜಿಲ್ಲೆಗಳ ‌85 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10:30ಕ್ಕೆ ಮಿಕ್ಕುಳಿದ ವೃಂದದವರಿಗೆ ಪರೀಕ್ಷೆ ಆರಂಭವಾದರೆ, ಕಲ್ಯಾಣ ಕರ್ನಾಟಕ ವೃಂದದವರಿಗೆ ಮಧ್ಯಾಹ್ನ 3ರಿಂದ ಆರಂಭವಾಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಮಿಕ್ಕುಳಿದ ವೃಂದದಲ್ಲಿ 1,42,912 ಮಂದಿ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ‌ 38,332 ಮಂದಿ ಅರ್ಜಿ ಸಲ್ಲಿಸಿದ್ದು, ಇಷ್ಟೂ ಮಂದಿಗೆ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದ್ದಾರೆ.

ಪರೀಕ್ಷಾ ಅಕ್ರಮಗಳಿಗೆ ಯಾವುದೇ ಅವಕಾಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕ್ಯಾಮೆರಾ ಕಣ್ಗಾವಲು ಇರುತ್ತದೆ. ಅಲ್ಲದೇ ವೆಬ್ ಕಾಸ್ಟಿಂಗ್ ಕೂಡ ಮಾಡುತ್ತಿದ್ದು, ಅಭ್ಯರ್ಥಿಗಳು ಎಚ್ಚರಿಕೆಯಿಂದ ಪರೀಕ್ಷೆ ಬರೆಯಬೇಕು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ: ಹೆಚ್‌ಡಿಕೆ

Spread the loveಬೆಂಗಳೂರು: ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ ಎಂದು ರಾಜ್ಯ ಸರ್ಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ