Breaking News

ಪಕ್ಷ ವಿರೋಧಿ ಚಟುವಟಿಕೆ – ಇಬ್ಬರು ಶಾಸಕರನ್ನು ಉಚ್ಚಾಟಿಸಿದ ಟಿಎಂಸಿ

Spread the love

ಕೋಲ್ಕತ್ತಾ: ಪಶ್ಚಿಮ ಬಂಗಾಳ  ರಾಜಕೀಯದಲ್ಲಿ ನಕಲಿ ಸಹಿ ಆರೋಪ ಭಾರಿ ಸಂಚಲನ ಸೃಷ್ಟಿಸಿದೆ. ಈ ವಿವಾದದ ನಡುವೆಯೇ ತೃಣಮೂಲ ಕಾಂಗ್ರೆಸ್ ತನ್ನ ಇಬ್ಬರು ಶಾಸಕರಾದ ಸಂದೀಪನ್ ಸಹಾ ಮತ್ತು ಋತಬ್ರತ ಬ್ಯಾನರ್ಜಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟಿಎಂಸಿ ತಿಳಿಸಿದೆ.

ಈ ಬೆಳವಣಿಗೆಗೂ ಮುನ್ನ, ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೋಭಾಂದೇಬ್ ಚಟ್ಟೋಪಾಧ್ಯಾಯ ಅವರನ್ನು ಬೆಂಬಲಿಸುವ ಪತ್ರದಲ್ಲಿ ತಮ್ಮ ಪರವಾಗಿ ನಕಲಿ ಸಹಿ ಹಾಕಲಾಗಿದೆ ಎಂದು ಇಬ್ಬರು ಶಾಸಕರು ದೂರು ನೀಡಿದ್ದರು.

ಈ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಟಿಎಂಸಿಯ ಇಬ್ಬರು ಶಾಸಕರೇ ತಮ್ಮ ಸಹಿ ನಕಲಿ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ ಎಂದು ಹೇಳಿದ್ದರು. ಈ ಹೇಳಿಕೆ ನೀಡಿದ ಕೆಲವೇ ಹೊತ್ತಿನಲ್ಲಿ ಟಿಎಂಸಿ ತನ್ನ ಇಬ್ಬರು ಶಾಸಕರ ಉಚ್ಚಾಟನೆ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ?

Spread the loveಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಮುಂದಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ