ತುಮಕೂರು: ಲಾಕ್‍ಡೌನ್ ಉಲ್ಲಂಘಿಸಿದ್ದಷ್ಟೇ ಅಲ್ಲದೆ ಸಾಮಾಜಿಕ ಅಂತರ ಮರೆತ ತುರುವೇಕೆರೆ ಕ್ಷೇತ್ರದ ಬಿಜೆಪಿ ಶಾಸಕ ಮಸಾಲೆ ಜಯರಾಂ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಗುಬ್ಬಿ ತಾಲೂಕಿನ ಇಡಗೂರು ಗ್ರಾಮದಲ್ಲಿ ಮಸಾಲೆ ಜಯರಾಂ ಕೇಕ್ ಕತ್ತರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಜನರ ಗುಂಪು ಕಟ್ಟಿಕೊಂಡು, ಮಕ್ಕಳಿಗೆ ಕೇಕ್ ತಿನ್ನಿಸಿದ್ದಾರೆ. ಈ ಮೂಲಕ ಶಾಸಕರು ಲಾಕ್‍ಡೌನ್ ಉಲ್ಲಂಘಿಸಿದರೂ ಪೊಲೀಸರು ಈವರೆಗೂ ಯಾವುದೇ ಕ್ರಮ ಕೈಕೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಶಾಸಕ ಮಸಾಲೆ ಜಯರಾಂ ಸಾಮಾಜಿಕ ಅಂತರ ಮರೆತು, ಮಾಸ್ಕ್ ಸಹ ಹಾಕಿಕೊಳ್ಳದೇ ಬೇಜವಾಬ್ದಾರಿತನ ಮೆರೆದಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಹುಟ್ಟುಹಬ್ಬ ನಿಮಿತ್ತ ಜನರಿಗೆ ಬಿರಿಯಾನಿ ಊಟ ಹಾಕಿಸಿದ್ದರು. ಹೀಗಾಗಿ ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಜನರು ಸೇರಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಕೊರೊನಾ ಭೀತಿಯಿಂದ ಲಾಕ್‍ಡೌನ್ ಘೋಷಣೆ ಆಗಿರುವ ಹೊತ್ತಿನಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡು ಬಂಡತನ ಪ್ರದರ್ಶನ ತೋರಿಸ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಶಾಸಕ ವಿರುದ್ಧ ನೆಟ್ಟಿಗರು ಹಾಗೂ ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗಿದೆ.
.