Breaking News

ರಾಜ್ಯದ ಕರಾವಳಿ ಭಾಗದಲ್ಲಿ ಇಂದೇ ರಂಜಾನ್ ಹಬ್ಬ ಆಚರಣೆ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

Spread the love

ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಹಿಂದೆ ರಂಜಾನ್ ಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬದ ಸಂಭ್ರಮ ಕಳೆಕಟ್ಟಿದೆ.

ಕಳೆದ ಒಂದು ತಿಂಗಳಿಂದ ಮುಸ್ಲಿಮರು ಉಪವಾಸ ಆಚರಿಸಿದ್ದರು. ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಮೂಲಕ ಹಬ್ಬ ಆಚರಣೆ ಮಾಡುತ್ತಾರೆ.

ಹೌದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಅತ್ಯಂತ ಸಡಗರ-ಸಂಭ್ರಮದಿಂದ ‘ಈದುಲ್ ಫಿತ್ರ್’ ಹಬ್ಬವನ್ನು ಆಚರಿಸಲಾಗುತ್ತದೆ. ಇಂದು ಸಂಜೆ ಆಕಾಶದಲ್ಲಿ ಶವ್ವಾಲ್​ ತಿಂಗಳ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ, ನಾಳೆ ಶುಕ್ರವಾರ ಈದ್ ಹಬ್ಬವನ್ನು ಆಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

ಕಳೆದ 30 ದಿನಗಳಿಂದ ಮುಂಜಾನೆಯಿಂದ ಸಂಜೆಯವರೆಗೆ ಅನ್ನಾಹಾರಗಳನ್ನು ತ್ಯಜಿಸಿ, ಕಠಿಣ ಉಪವಾಸ ವ್ರತವನ್ನು ಕೈಗೊಂಡಿದ್ದ ಮುಸ್ಲಿಂ ಸಮುದಾಯದವರು ಇಂದು ಸಂಜೆ ಚಂದ್ರದರ್ಶನದೊಂದಿಗೆ ತಮ್ಮ ವ್ರತವನ್ನು ಪೂರೈಸಿದ್ದಾರೆ. ದಾನ-ಧರ್ಮ, ಪ್ರಾರ್ಥನೆ ಹಾಗೂ ಆಧ್ಯಾತ್ಮಿಕ ಚಿಂತನೆಗಳಲ್ಲಿ ತೊಡಗಿದ್ದ ಮುಸ್ಲಿಮರು, ಈಗ ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದ್ದಾರೆ.


Spread the love

About Laxminews 24x7

Check Also

ಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಕೊಲೆಗಳು ಆಗಬಾರದು: ಪ್ರಮೋದ್ ಮುತಾಲಿಕ್

Spread the love ಉಡುಪಿ, ಜು.29: ಸುರತ್ಕಲ್ ನಲ್ಲಿ ಯುವಕನೋರ್ವನ ಕೊಲೆ ಯಾವ ಕಾರಣಕ್ಕೆ ಆಗಿದೆಯೆಂಬುದು ಗೊತ್ತಿಲ್ಲ. ಆದರೆ ಕ್ರಿಯೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ