Breaking News

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

Spread the love

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ.

ರಾಜ್ಯ ಬಜೆಟ್‌ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಆಯ್ದ ಬಸ್‌ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್‌ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಲಾಗಿದೆ.

ಬಜೆಟ್‌ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್‌ ನಿಲ್ದಾಣಗಳಲ್ಲಿ ಇರುವ ತನ್ನ ಎಲ್‌ಇಡಿ ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.

ವಿಧಾನಸೌಧದಲ್ಲಿ ನಡೆಯುವ ಬಜೆಟ್‌ ಮಂಡನೆ ಹಾಗೂ ಬಳಿಕ ನಡೆಯುವ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠೀಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್‌ ನಿಲ್ದಾಣಗಳಲ್ಲಿ ಜನರು ವೀಕ್ಷಣೆ ಮಾಡುವ ಅವಕಾಶ ಕಲ್ಪಿಸಲಾಗುತ್ತದೆ.


Spread the love

About Laxminews 24x7

Check Also

ಸಿಎಂ ಸಿದ್ದರಾಮಯ್ಯ 1.15 ಲಕ್ಷ ಕೋಟಿ ರೂ. ಸಾಲದ ಬಜೆಟ್‌ ಮಂಡಿಸಲಿದ್ದಾರೆ: ಜನರ ಮೇಲೆ ತೆರಿಗೆ ಖಚಿತ: ಆರ್.ಅಶೋಕ್ ವಾಗ್ದಾಳಿ

Spread the loveಬೆಂಗಳೂರು: ಫೆ.6, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಈ ಬಗ್ಗೆ ವಿಪಕ್ಷ ನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ