Breaking News

ನಾಳೆ ಸಂಘಟನೆಗಳಿಂದ ಬೆಳಗಾವಿ ಮಹಾನಗರ ಪಾಲಿಕೆಗೆ ಮುತ್ತಿಗೆ: ಚಂದರಗಿ

Spread the love

ಬೆಳಗಾವಿ: ‘ಇಲ್ಲಿನ ಮಹಾನಗರ ಪಾಲಿಕೆ ಪರಿಷತ್‌ ಸಭೆಯಲ್ಲಿ ಕರ್ನಾಟಕ ಪರವಾದ ನಿರ್ಣಯ ಅಂಗೀಕರಿಸಬೇಕು’ ಎಂದು ಆಗ್ರಹಿಸಿ ಮೇ 26ರಂದು ವಿವಿಧ ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ಪಾಲಿಕೆಗೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ.

ಅಂದಿನ ಹೋರಾಟದಲ್ಲಿ ಭಾಗವಹಿಸಲು ಕನ್ನಡ ಹೋರಾಟಗಾರರಾದ ವಾಟಾಳ್‌ ನಾಗರಾಜ, ಸಾ.ರಾ.

ಗೋವಿಂದು, ಕೆ.ಆರ್. ಕುಮಾರ ಹಾಗೂ ಮಂಜುನಾಥ ದೇವ ಅವರು ಬೆಳಗಾವಿಗೆ ಆಗಮಿಸುವರು.

ಬೆಳಿಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪುನರ್ ಸ್ಥಾಪನೆಗೊಂಡ ಹಲ್ಮಿಡಿ ಶಾಸನದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಅವರ ನೇತೃತ್ವದಲ್ಲಿ 20 ಕನ್ನಡ ಸಂಘಟನೆಗಳ ಪ್ರಮುಖರು ಮತ್ತು ಕಾರ್ಯಕರ್ತರು ಪಾಲಿಕೆಗೆ ಮುತ್ತಿಗೆ ಹಾಕುವರು.

‘ಹಲ್ಮಿಡಿ ಶಾಸನದ ಪ್ರತಿಕೃತಿಗೆ ಮಲಪ್ರಭಾ, ಘಟಪ್ರಭಾ, ದೂಧಗಂಗಾ, ಹಿರಣ್ಯಕೇಶಿ ಹಾಗೂ ಕೃಷ್ಣಾ ನದಿಗಳ ನೀರಿನ ಅಭಿಷೇಕ, ಕ್ಷೀರಾಭಿಷೇಕ ನಡೆಯಲಿದೆ. ಈ ಕಾರ್ಯಕ್ರಮ ಹಾಗೂ ಪಾಲಿಕೆಗೆ ಮುತ್ತಿಗೆ ಹೋರಾಟದಲ್ಲಿ ಕನ್ನಡಿಗರು ಮತ್ತು ನಾನಾ ಸಂಘ-ಸಂಸ್ಥೆಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ