Breaking News

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

Spread the love

ಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ ಹೊಸಕೊಪ್ಪ ಸಮೀಪದ ಹಲಕೊಟ್ಟಿಗೆ ಕ್ರಾಸ್ ಬಳಿ ನಡೆದಿದೆ.

ಘಟನೆಯಲ್ಲಿ 7-8 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ.

ದಾವಣಗೆರೆಯ ನಿಟ್ಟುವಳ್ಳಿಯ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದ 24 ಜನ ಮಹಿಳಾ ಪ್ರವಾಸಿಗರು ಕೊಲ್ಲೂರು- ಸಿಗಂದೂರು- ಬಳೆ ಪದ್ಮಾವತಿ ದೇವಸ್ಥಾನಕ್ಕೆ ಬಂದಿದ್ದರು. ಬಳೆ ಪದ್ಮಾವತಿ ದೇವಾಲಯಕ್ಕೆ ತೆರಳುವ ಮಾರ್ಗದ ಹಲಕೊಟ್ಟಿಗೆ ಕ್ರಾಸ್ ಬಳಿ ತೆರಳುತ್ತಿದ್ದಾಗ ಬಸ್‌ನ ಬ್ರೇಕ್ ಫೇಲ್ ಆಗಿ ಮನೆ ಮೇಲೆ ಪಲ್ಟಿಯಾಗಿದೆ.

ಮನೆ ಮೇಲೆ ಬಸ್ ಪಲ್ಟಿಯಾದ ಪರಿಣಾಮ ಮನೆಗೆ ಹಾನಿಯಾಗಿದೆ. ಗಾಯಾಳುಗಳಿಗೆ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕಸ ವಿಂಗಡನೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು – ತುಂಡು ತುಂಡಾದ ದೇಹ

Spread the loveಚಿಕ್ಕಬಳ್ಳಾಪುರ: ಕಸ ವಿಂಗಡನೆ ಯಂತ್ರಕ್ಕೆ  ಸಿಲುಕಿ ಮಹಿಳೆ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದ ಎಂಎಸ್‌ಜಿಪಿ ಘಟಕದಲ್ಲಿ ನಡೆದಿದೆ. ಕಾಡತಿಪ್ಪೂರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ