Breaking News

ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Spread the love

ಬೆಳಗಾವಿ: ಹಿಟ್ ಸ್ಟ್ರೋಕ್‌ಗೆ  ರಾಜ್ಯದಲ್ಲಿ ಎರಡನೇಯ ಬಲಿಯಾಗಿದೆ. ಬಿಸಿಲಿನ ತಾಪಕ್ಕೆ ಬೆಳಗಾವಿ ಜಿಲ್ಲೆಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಲಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾಗಿರುವ ವೆಂಕಟೇಶ್ ಬಳ್ಳಾರಿ (35) ಮೃತ ದುರ್ದೈವಿ. ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಸೋಮವಾರ (ಏ.21) ಬಸವೇಶ್ವರ ಜಯಂತಿ ಸಂದರ್ಭದಲ್ಲಿ ಫೋಟೋ ಪೂಜೆ ಬಳಿಕ ಮೆರವಣಿಗೆ ಸಂದರ್ಭದಲ್ಲಿ ತಲೆ ತಿರುಗಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಈ ಕುರಿತು ಆಪ್ತರು ಮಾಹಿತಿ ನೀಡಿದ್ದು, ವೆಂಕಟೇಶ ಅವರು ಬಿಸಿಲಿನ ತಾಪ ತಾಳಲಾರದೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ