Breaking News

ಗಣೇಶ ವಿಸರ್ಜನೆ ವೇಳೆ ದುರಂತ: ಬೆಳಗಾವಿಯಲ್ಲಿ ಕೆರೆಯಲ್ಲಿ ಮುಳುಗಿ ಯುವಕ ಸಾವು

Spread the love

ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿಯ ಮಚ್ಚೆ ಗ್ರಾಮದಲ್ಲಿ ನಡೆದಿದೆ.

ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆಗೆ ಇಳಿದಿದ್ದ ಯುವಕ ನೀರಿನಲ್ಲಿ ಮುಳುಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕನ ಶವವನ್ನು ಕೆರೆಯಿಂದ ಹೊರತೆಗೆದಿದ್ದಾರೆ.

ಘಟನೆ ಕುರಿತು ತುರ್ತು ಕರೆ ಬಂದ ತಕ್ಷಣ ಸೋಶಿಯಲ್ ವರ್ಕರ್ ರೆಸ್ಕ್ಯೂ ಟೀಂ ಬೆಳಗಾವಿ ಸ್ಥಳಕ್ಕೆ ಧಾವಿಸಿದೆ. ಸುಮಾರು 15 ನಿಮಿಷಗಳಲ್ಲಿ ಸ್ಥಳಕ್ಕೆ ತಲುಪಿದ ರಕ್ಷಣಾ ತಂಡದ ಅವಧೂತ್ ತುಡವೇಕರ್, ಪದ್ಮಪ್ರಸಾದ್ ಹೊಳಿ, ಶುಭಂ ಹೊಳಿ, ಮೈಕೆಲ್ ಪಿಂಟೋ, ಜಗದೀಶ್ ಗಸ್ತಿ ಹಾಗೂ ರಾಜು ಟಕ್ಕೇಕರ್ ಅವರು ತಕ್ಷಣ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಸುಮಾರು 30 ನಿಮಿಷಗಳ ಕಾರ್ಯಾಚರಣೆಯ ಬಳಿಕ ಯುವಕನ ಶವವನ್ನು ಕೆರೆಯಿಂದ ಹೊರತೆಗೆದು, ಮುಂದಿನ ಕಾನೂನು ಪ್ರಕ್ರಿಯೆಗಾಗಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಎಸ್‌ಡಿಆರ್‌ಎಫ್, ಬೆಳಗಾವಿ ಗ್ರಾಮೀಣ ಪೊಲೀಸರು ಹಾಗೂ ಬೆಳಗಾವಿ ಅಗ್ನಿಶಾಮಕ ದಳ ಸಿಬ್ಬಂದಿ ಸಹಕಾರ ನೀಡಿದ್ದಾರೆ.

ಗಣೇಶ ವಿಸರ್ಜನೆ ಸಂಭ್ರಮದ ನಡುವೆ ನಡೆದ ಈ ದುರಂತ ಮಚ್ಚೆ ಗ್ರಾಮದಲ್ಲಿ ದುಃಖದ ವಾತಾವರಣ ಮೂಡಿಸಿದೆ.


Spread the love

About Laxminews 24x7

Check Also

ಸರ್ಕಾರದಿಂದ ಬಾರದ ಕೋಟ್ಯಂತರ ರೂಪಾಯಿ ಅನುದಾನ – ಪತ್ರ ಬರೆದು ಕೆಆರ್‌ಐಡಿಎಲ್ ಎಇಇ ನಾಪತ್ತೆ!

Spread the loveಗದಗ: ರಾಜ್ಯ ಸರ್ಕಾರದ ಅನುದಾನ ಬಾರದಕ್ಕೆ ಪತ್ರ ಬರೆದು KRIDL ಎಇಇ (ಸಹಾಯಕ ಕಾರ್ಯಪಾಲಕ ಎಂಜಿನಿಯರ್) ಅಧಿಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ