Breaking News

ಹಳಿ ಮೇಲೆ ಮಲಗಿದ್ದ 14 ಮಂದಿ ಕೂಲಿ ಕಾರ್ಮಿಕರ ಮೇಲೆ ಹರಿದ ರೈಲು,ಅಪ್ಪಚ್ಚಿಯಾದ ಮಕ್ಕಳು, ಮಹಿಳೆಯರ ಮೃತ ದೇಹಗಳು

Spread the love

ಮುಂಬೈ: ಹಳಿ ಮೇಲೆ ಮಲಗಿದ್ದ 14 ಮಂದಿ ಕೂಲಿ ಕಾರ್ಮಿಕರ ಮೇಲೆ ರೈಲು ಹರಿದ ದಾರುಣ ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮಕ್ಕಳು, ಮಹಿಳೆಯರು ಸೇರಿದಂತೆ 15 ಜನ ವಲಸೆ ಕಾರ್ಮಿಕರು ಔರಂಗಾಬಾದ್-ಜಲ್ನಾ ರೈಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು. ನಸುಕಿನ ಜಾವ 4 ಗಂಟೆಗೆ ಬಂದ ಗೂಡ್ಸ್ ರೈಲು ಕಾರ್ಮಿಕರ ಮೇಲೆ ಹರಿದಿದೆ. ಪರಿಣಾಮ ಮಕ್ಕಳು, ಕಾರ್ಮಿಕರ ದೇಹ ತುಂಡು ತುಂಡಾಗಿ ಟ್ರ್ಯಾಕ್ ಮೇಲೆ, ಕೆಳಗೆ ಬಿದ್ದಿವೆ.ಕರ್ಮದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಬೆಳಗ್ಗೆ 6 ಗಂಟೆ ಸುಮಾರಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.


Spread the love

About Laxminews 24x7

Check Also

ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣ ದೇಶದಾದ್ಯಂತ ಸದ್ದು ಮಾಡುತ್ತಿದೆ: ಪ್ರಲ್ಹಾದ್​ ಜೋಶಿ

Spread the loveಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಬಾಣಂತಿಯರ ಸಾವಿಗೆ ಕಾರಣ: ಪ್ರಲ್ಹಾದ್​ ಜೋಶಿ ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ