Home / ರಾಷ್ಟ್ರೀಯ / ಹಳಿ ಮೇಲೆ ಮಲಗಿದ್ದ 14 ಮಂದಿ ಕೂಲಿ ಕಾರ್ಮಿಕರ ಮೇಲೆ ಹರಿದ ರೈಲು,ಅಪ್ಪಚ್ಚಿಯಾದ ಮಕ್ಕಳು, ಮಹಿಳೆಯರ ಮೃತ ದೇಹಗಳು

ಹಳಿ ಮೇಲೆ ಮಲಗಿದ್ದ 14 ಮಂದಿ ಕೂಲಿ ಕಾರ್ಮಿಕರ ಮೇಲೆ ಹರಿದ ರೈಲು,ಅಪ್ಪಚ್ಚಿಯಾದ ಮಕ್ಕಳು, ಮಹಿಳೆಯರ ಮೃತ ದೇಹಗಳು

Spread the love

ಮುಂಬೈ: ಹಳಿ ಮೇಲೆ ಮಲಗಿದ್ದ 14 ಮಂದಿ ಕೂಲಿ ಕಾರ್ಮಿಕರ ಮೇಲೆ ರೈಲು ಹರಿದ ದಾರುಣ ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮಕ್ಕಳು, ಮಹಿಳೆಯರು ಸೇರಿದಂತೆ 15 ಜನ ವಲಸೆ ಕಾರ್ಮಿಕರು ಔರಂಗಾಬಾದ್-ಜಲ್ನಾ ರೈಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು. ನಸುಕಿನ ಜಾವ 4 ಗಂಟೆಗೆ ಬಂದ ಗೂಡ್ಸ್ ರೈಲು ಕಾರ್ಮಿಕರ ಮೇಲೆ ಹರಿದಿದೆ. ಪರಿಣಾಮ ಮಕ್ಕಳು, ಕಾರ್ಮಿಕರ ದೇಹ ತುಂಡು ತುಂಡಾಗಿ ಟ್ರ್ಯಾಕ್ ಮೇಲೆ, ಕೆಳಗೆ ಬಿದ್ದಿವೆ.ಕರ್ಮದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಬೆಳಗ್ಗೆ 6 ಗಂಟೆ ಸುಮಾರಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.


Spread the love

About Laxminews 24x7

Check Also

ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ

Spread the love ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದ್ದು, ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ