Breaking News

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ: ಕರ್ನಾಟಕಕ್ಕೆ ನ್ಯಾ. ಎಂ.ಎಸ್. ರಾಮಚಂದ್ರ ರಾವ್, ಜಾರ್ಖಂಡ್‌ಗೆ ನ್ಯಾ. ವಿಭು ಬಖ್ರು ಶಿಫಾರಸು

Spread the love

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಕೊಲಿಜಿಯಂ, ದೇಶದ ಮೂರು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ ಮತ್ತು ನೇಮಕಾತಿಗೆ ಮಹತ್ವದ ಶಿಫಾರಸು ಮಾಡಿದೆ. ನ.24 ರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಸ್ತುತ ತ್ರಿಪುರಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿರುವ ನ್ಯಾ. ಎಂ.ಎಸ್. ರಾಮಚಂದ್ರ ರಾವ್ ಅವರನ್ನು ಕರ್ನಾಟಕ ಹೈಕೋರ್ಟ್‌ನಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲು ಶಿಫಾರಸು ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ. ಜಾರ್ಖಂಡ್ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿಗಳು ನವೆಂಬರ್ 27 ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಗಾವಣೆ ಮಾಡಲಾಗುತ್ತಿದೆ.

ನ್ಯಾ. ಎಂ.ಎಸ್. ರಾಮಚಂದ್ರ ರಾವ್ ಅವರು ಕರ್ನಾಟಕಕ್ಕೆ ವರ್ಗಾವಣೆಯಾಗುತ್ತಿರುವುದರಿಂದ ತೆರವಾಗುವ ತ್ರಿಪುರಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ, ಹಿಮಾಚಲ ಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿ ವಿವೇಕ್ ಸಿಂಗ್ ಠಾಕೂರ್ ಅವರನ್ನು ನೇಮಿಸಲು ಶಿಫಾರಸು ಮಾಡಲಾಗಿದೆ.

ನ್ಯಾ. ಎಂ.ಎಸ್. ರಾಮಚಂದ್ರ ರಾವ್: ಮೂಲತಃ ತೆಲಂಗಾಣ ಹೈಕೋರ್ಟ್‌ನವರಾದ ಇವರು, ಈ ಹಿಂದೆ ತೆಲಂಗಾಣ ಮತ್ತು ಆಂಧ್ರಪ್ರದೇಶ ಹೈಕೋರ್ಟ್‌ಗಳಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ತ್ರಿಪುರಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.

ನ್ಯಾ. ವಿಭು ಬಖ್ರು ಇವರು 2013ರಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ನಂತರ 2025ರಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ್ದರು.


Spread the love

About Laxminews 24x7

Check Also

ಗ್ಯಾರಂಟಿ ಸಮಾವೇಶ ಮುಗಿಸಿ ಮರಳುತ್ತಿದ್ದ ಬಸ್ಸಿಗೆ ಟ್ಯಾಂಕರ್ ಡಿಕ್ಕಿ – ಹಲವರಿಗೆ ಗಾಯ

Spread the loveಉಡುಪಿ: ಕಾಂಗ್ರೆಸ್ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಿ ವಾಪಸ್ ಮನೆಗೆ ಮರಳುತ್ತಿದ್ದ ಪ್ರವಾಸಿ ಬಸ್ಸೊಂದು ಅಪಘಾತಕ್ಕೀಡಾಗಿ ಹಲವರು ಗಾಯಗೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ