ಬೆಳಗಾವಿಯಲ್ಲಿ ಸಾರಿಗೆ ಬಸ್ ಅಪಘಾತ: 11 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

Spread the love

ಬೆಳಗಾವಿ :ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹನ್ನೊಂದು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಖಾನಾಪುರ ತಾಲೂಕಿನ ನಂದಗಡದ ಸರಕಾರಿ ಆಸ್ಪತ್ರೆ ಎದುರುಗಡೆ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಹನ್ನೊಂದು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಖಾನಾಪುರ ಘಟಕಕ್ಕೆ ಸೇರಿದ ಕೆಎ-೨೨ ಎಫ್-೨೧೦೩ ಸಂಖ್ಯೆಯ ಬಸ್ಸು ಖಾನಾಪುರದಿಂದ ಬೀಡಿಗೆ ತೆರಳುತ್ತಿತ್ತು. ನಂದಗಡದ ಸರಕಾರಿ ಆಸ್ಪತ್ರೆ ಎದುರುಗಡೆ ಬರುತ್ತಿದ್ದಾಗ, ಏಕಾಏಕಿ ರಸ್ತೆಗೆ ಅಡ್ಡ ಬಂದ ಕಾರನ್ನು ತಪ್ಪಿಸಲು ಯತ್ನಿಸಿದ ಬಸ್‌ ಚಾಲಕನ ನಿಯಂತ್ರಣ ತಪ್ಪಿ, ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರಲ್ಲಿ ಜ್ಯೋತಿ ತಹಶಿಲ್ದಾರ(20), ಶ್ರೇಯಸ್ ಮಾದಾರ(17), ಮೆಹಬೂಬಿ ಸನದಿ(60), ಅಣ್ಣಪೂರ್ಣ ಹುಡೇದಾ‌ರ್(36), ಸುನೀತಾ ಕಡಬಿ(27), ಮಂಜುಳಾ ಹುಡೇದಾ‌ರ್(28), ಪವಿತ್ರಾ ಹುಡೇದಾರ್(28), ಶಿವಾನಿ ಅಂಬೇವಾಡ್ಕರ್(37) ಮತ್ತು ಶೀಲಾ ಮಿಟಗಾರ (35) ಸೇರಿದ್ದಾರೆ.

ಅಪಘಾತಕ್ಕೆ ಕಾರಣನಾದ ಕಾರು ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದು, ಈ ಸಂಬಂಧ ನಂದಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

3.23 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಪೂಜೆ ನೆರವೇರಿಸಿ ಚಾಲನೆ

Spread the loveಬೆಳಗಾವಿ ಗ್ರಾಮೀಣ ಕ್ಷೇತ್ರದ ಕುವೆಂಪು ನಗರದ ಕೆ.ಎಲ್.ಇ ಇಂಟರ್ನ್ಯಾಷನಲ್ ಸ್ಕೂಲ್ ನ ಮುಖ್ಯ ರಸ್ತೆ ಹಾಗೂ ಜಯನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ